ಮೈಸೂರು:ಈ ಬಾರಿಯ ದಸರಾ ಉತ್ಸವದ ಉದ್ಘಾಟನೆಗೆ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ ಜಗದ್ಗುರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಆಹ್ವಾನಿಸುವಂತೆ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸರಕಾರಕ್ಕೆ ಮನವಿ ಮಾಡಿಕೊಂಡರು.
ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರ ದಲ್ಲಿ ಶ್ರೀಗಳ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾಜಕ್ಕೆ ವಿವಿಧ ಸೇವೆಗಳ ಮೂಲಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.ಶಾಸಕರಾದ ಟಿ ಎಸ್ ಶ್ರೀವತ್ಸರವರು ಈಗಾಗಲೇ ಎರಡು ಬಾರಿ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ .ಮುಖ್ಯಮಂತ್ರಿಗಳು ಅವರ ಹಾಗು ನಾಡಿನ ಜನರ ಇಚ್ಛೆಯಂತೆ ಶ್ರೀಗಳನ್ನೇ ಆಮಂತ್ರಿಸಲಿದ್ದಾರೆ ಎಂಬ ನಂಬಿಕೆ ನಮಗಿದೆ ಎಂದರು.
ಶಿಭಿರದಲ್ಲಿ 30ಕ್ಕೂ ಹೆಚ್ಚು ಶ್ರೀಗಳ ಭಕ್ತರು ರಕ್ತದಾನ ಮಾಡಿ ಶ್ರೀಗಳಿಗೆ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್,ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಜಿ ರಾಘವೇಂದ್ರ, ಮಹೇಂದ್ರ ಶೈವ, ಪತ್ರಕರ್ತರಾದ ಮಧು ಕುಮಾರ್, ಸದಾಶಿವ, ರಶ್ಮಿ, ರಘು,ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ವರ್ಗ ಹಾಜರಿದ್ದರು.
———————-ಮಧುಕುಮಾರ್