ಮೈಸೂರು-ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ರಾಷ್ಟ್ರಪತಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿ ಘಟಕ ವತಿಯಿಂದ ಜಿಲ್ಲಾಧಿಕಾರಿಗಳಾದ ಲಕ್ಷ್ಮಿಕಾಂತ ರೆಡ್ಡಿರವರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭ ನಗರ ಅಧ್ಯಕ್ಷ ಎಲ್ ನಾಗೇಂದ್ರ,ಗ್ರಾಮಾಂತರ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ,ಮಾಜಿ ಸಂಸದ ಪ್ರತಾಪ್ ಸಿಂಹ,ಮಾಜಿ ಶಾಸಕರಾದ ಹರ್ಷವರ್ಧನ್ ಹಾಗೂ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.