ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಗೌರವ ಕಾರ್ಯದರ್ಶಿಗಳಾದ ಶ್ರೀ ಡಿ.ಕೆ. ರಾಮಕೃಷ್ಣ ಹಾಗೂ ಖಜಾಂಚಿಗಳಾದ ಶ್ರೀ ಬಿ. ಮಹಾದೇವ್ ಅವರು ದಿನಾಂಕ 24-12-2024 ರಂದು ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಹತ್ವದ ವಿಚಾರದಲ್ಲಿ ಚರ್ಚೆ ನಡೆಸಿದರು.
ಚಿತ್ರೀಕರಣಕ್ಕಾಗಿ HMT ಫ್ಯಾಕ್ಟ್ರಿಯ ಬಾಡಿಗೆ ದರವನ್ನು ದುಬಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಈ ಚರ್ಚೆ ನಡೆಯಿತು. ಬಾಡಿಗೆ ದರವನ್ನು ಹಿಂದಿನ ಸ್ಥಿತಿಯಲ್ಲೇ ಮುಂದುವರಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಸ್ಪಂದಿಸಿ, ಈ ಬಗ್ಗೆ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಚಲನಚಿತ್ರ ವಾಣಿಜ್ಯ ಮಂಡಳಿಯ ಈ ಪ್ರಯತ್ನವು ಚಿತ್ರರಂಗಕ್ಕೆ ಉತ್ತಮ ಪ್ರಯೋಜನವನ್ನು ತರುತ್ತದೆ ಎಂದು ನಿರೀಕ್ಷಿಸಲಾಗಿದೆ.