ಸಕಲೇಶಪುರ:-ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳು ಅಡಗಿರುತ್ತವೆ.ಅದನ್ನು ಹೊರತರಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ನೆರವಾಗುತ್ತವೆ.ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಸಮರ್ಪಕವಾಗಿ ಪಡೆದುಕೊಳ್ಳುವಂತಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ.ಎಸ್ ಹೇಳಿದರು.
ಶುಕ್ರವಾರ ಸಂತೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಬ್ಯಾಕರವಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಬ್ಯಾಕರವಳ್ಳಿ ಕ್ಲಸ್ಟರ್ ನ 12 ಶಾಲೆಯ ಸುಮಾರು 100ಕ್ಕು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ,ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ 25 ಬಹುಮಾನಗಳನ್ನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಬ್ಯಾಕರವಳ್ಳಿ ಕ್ಲಸ್ಟರ್ ಮಟ್ಟದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಲ್ಲೇಶ್ ಹಾಗೂ ಸಿದ್ದೇಶ್,ನಜೀಬ್ ಪಾಷಾ,ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರತಾಪ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಯೋಗೀಶ್ ವೈ, ಜೆ , ಖಜಾಂಚಿ ರೇಣುಕ. ಬಿ, ಆರ್,ಶಾಲಾ ಆಡಳಿತ ಮಂಡಳಿ ಸದಸ್ಯೆ ಚಂದ್ರಕಲಾ ಪ್ರಕಾಶ್ , ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.
——————–-ರಕ್ಷಿತ್ ಎಸ್ ಕೆ