ಹಾಸನ:ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಅಧ್ಯಾಪಕಿ ಸುನಿತಾ ಜಿ ಅವರಿಗೆ ಪಿ.ಎಚ್.ಡಿ ಪದವಿ

ಹಾಸನ:ನಗರದ ಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಅಧ್ಯಾಪಕಿ ಸುನಿತಾ ಜಿ.ಅವರು ‘ಹಾಸನ ಜಿಲ್ಲೆಯಲ್ಲಿ ವಿಶೇಷ ಆರ್ಥಿಕ ವಲಯಗಳು ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಸಾರ್ವಜನಿಕ ಪ್ರತಿಕ್ರಿಯೆ ಒoದು ವಿಮರ್ಶಾತ್ಮಕ ವಿಶ್ಲೇಷಣೆ’ ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬoಧಕ್ಕೆ ಮೈಸೂರು ವಿ.ವಿ. ಪಿ.ಎಚ್.ಡಿ ಪದವಿ ನೀಡಿದೆ.

ಅಧ್ಯಾಪಕಿ ಸುನಿತಾ ಅವರು ಡಾ.ಜಿ.ಎಚ್. ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಹಾ ಪ್ರಬಂಧವನ್ನು ಸಿದ್ಧಪಡಿಸಿದ್ದು, ಮೈಸೂರು ವಿಶ್ವ ವಿದ್ಯಾನಿಲಯದ ಮುಂಬರುವ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

× How can I help you?