ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ 5 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.೨೫ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2.50ಲಕ್ಷ ರೂ. ಮೀರಿರಬಾರದು. ಅರ್ಜಿಯನ್ನು ಮಾರ್ಚ್ ೧೦ರೊಳಗಾಗಿ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂ.ಸಂ.0816-2273724 ನ್ನು ಸಂಪರ್ಕಿಸಬೇಕೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.