ಎಚ್.ಡಿ.ಕೋಟೆ-ಸಾಲಕ್ಕೆ-ಹೆದರಿ-ರೈತ ಆತ್ಮಹತ್ಯೆ

ಎಚ್.ಡಿ.ಕೋಟೆ: ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ರೈತ ಜಯರಾಮೇಗೌಡ (50) ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರೈತ ಜಯರಾಮೇಗೌಡ ಇಕ್ವಿಟಾಸ್ ಬ್ಯಾಂಕಿನಲ್ಲಿ 5 ಲಕ್ಷ ರೂ, ಹಾಗೂ ಇತರೆ 5 ಲಕ್ಷ ರೂ, ಒಟ್ಟು 10 ಲಕ್ಷ ರೂ, ಸಾಲ ಮಾಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ದೊರೆತಿದ್ದು, ತಮ್ಮ 3 ಎಕರೆ ಜಮೀನಿನಲ್ಲಿ ಕಬ್ಬು, ಶುಂಠಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆದಿದ್ದು, ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ಮಾಡಿರುವ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಯರಾಮೇಗೌಡರ ಪುತ್ರ ಜಗದೀಶ್ ಎಚ್.ಡಿ‌.ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಸ್ಥಳಕ್ಕೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಬ್ಬೀರ್ ಹುಸೇನ್ ಗ್ರಾಮಕ್ಕೆ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

-ಶಿವು ಕೋಟೆ, ಎಚ್.ಡಿ.ಕೋಟೆ

Leave a Reply

Your email address will not be published. Required fields are marked *

× How can I help you?