ಹಾಸನ : ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಅವರನ್ನು ಪ್ರೀತಿಯಿಂದ ಕಾಣಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಹೇಳಿದ್ದಾರೆ.
ಹಾಸನ ತಾಲ್ಲೂಕು ವ್ಯಾಪ್ತಿಯ ಬೂವನಹಳ್ಳಿ, ದೊಡ್ಡ ಗೇಣಿಗೆರೆ, ಕೌಶಿಕ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆ ಸ್ವಚ್ಚತೆ, ಸಿಬ್ಬಂದಿಗಳ ದಿನಚರಿ, ಔಷಧಗಳ ಪಟ್ಟಿ ಸೇರಿದಂತೆ ಇನ್ನಿತರೆ ಪರಿಶೀಲನೆ ಮಾಡಿದರು.
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಆತ್ಮಸ್ಥೆರ್ಯ ತುಂಬುವುದರ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಮಾರ್ಗದರ್ಶನ ಮಾಡುವಂತೆ ಸೂಚಿಸಿದರು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಲು ತಿಳಿಸಿದರು.

ಇದೇ ವೇಳೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಹೆಚ್.ಡಿ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು.
-ಮಾಲಾ , ಹಾಸನ