ನವದೆಹಲಿ: ಇಂದು ನವದೆಹಲಿಯ ಸಂಸತ್ ಭವನದಲ್ಲಿ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣನವರು ಮಾನ್ಯ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ರವರನ್ನು ಭೇಟಿ ಮಾಡಿದರು.
ಈ ಭೇಟಿಯ ಸಂದರ್ಭದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಲೈನ್ ಗೆ ಸಂಬಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿಗೆ ಸಂಬಂಧಪಟ್ಟಂತೆ, ರೈಲ್ವೇ ಬೋರ್ಡ್ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ಅನುಮೋದಿಸಿಕೊಡಬೇಕೆಂದು ಮಾನ್ಯ ಕೇಂದ್ರ ಗೃಹ ಸಚಿವರಲ್ಲಿ ಕೋರಿದರು.
ಈ ಬಗ್ಗೆ ಮಾನ್ಯ ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಅತೀವ ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ವಿ.ಸೋಮಣ್ಣನವರು ತಿಳಿಸಿದ್ದಾರೆ.
ಕೆ.ಬಿ.ಚಂದ್ರಚೂಡ