ಹಾಸನ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಂಬತ್ತು ಖಾಸಗಿ ಶಾಲೆಗಳ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲೆಯ ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ನೀಡಿಲಾಯಿತು.ಆಲೂರು ತಾ. ಕಿರಣ್ ಕಾನ್ವೆಂಟ್ ಸಿಂಹಾಸಿನಿ,ಅರಕಲಗೂಡು ತಾ. ಎಂ.ಕೆ.ಎಸ್.ಲಯನ್ಸ್ ವಿದ್ಯಾನಿಕೇತನ ಶಾಲೆಯ ಗಾಯತ್ರಿ, ಅರಸೀಕೆರೆ ತಾ.ಅರವಿಂದ ಆಂಗ್ಲಮಾಧ್ಯಮ ಶಾಲೆಯ ಯೋಗೀಶ್, ಬೇಲೂರು ತಾ.ಯುನೈಟೆಡ್ ಅಕಾಡೆಮಿ ಶಾಲೆಯ ದೀಪ, ಚನ್ನರಾಯಪಟ್ಟಣ ತಾ.ವಿವೇಕಾನಂದ ಇಂಟರ್‌ನ್ಯಾಷನಲ್ ಶಾಲೆಯ ಮೀನಾಕ್ಷಿ, ಹಾಸನ ತಾ. ವಿಜಯ ಶಾಲೆಯ ನಂದೀಶ ಕೆ. ಎಸ್. ಹಾಗೂ ಆದಿಚುಂಚನಗಿರಿ ಶಾಲೆಯ ಕಿರಣ,ಹೊಳೆನರಸೀಪುರ ತಾ. ಸಂಸ್ಕಾರ್ ಪಬ್ಲಿಕ್ ಶಾಲೆಯ ಲತಾ ಟಿ.ಡಿ. ಹಾಗೂ ಸಕಲೇಶಪುರ ತಾ. ಬ್ಲಾಸಂ ಶಾಲೆಯ ಮಂಜುಳ ಅವರುಗಳನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಮಾತನಾಡಿದ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಬಿ.ಈ. ಶಿವರಾಮೇಗೌಡ ಅವರು, ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಾಗಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ರೂವಾರಿಗಳಾಗಲು ನಿಮ್ಮ ಕೊಡುಗೆಯು
ನಿರಂತರವಾಗಿರಲೆoದು ಹಾರೈಸುತ್ತೇವೆ.ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತಮಂಡಳಿಗಳ ಒಕ್ಕೂಟದ ಒತ್ತಾಯದ ಮೇರೆಗೆ, ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಂತಹ ಉತ್ತಮ ಕಾರ್ಯಕ್ಕೆ ಕಳೆದ ಐದು ವರ್ಷಗಳಿಂದ ಚಾಲನೆ ನೀಡಿದೆ. ಖಾಸಗಿ ಶಾಲೆಗಳ ಶಿಕ್ಷಕರ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಧನ್ಯವಾದಗಳು ಎಂದರು.
ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿ.ಕೆ. ಟೈಮ್ಸ್ ಗಂಗಾಧರ್ ಹಾಗೂ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.
—————–——ಪ್ರಕಾಶ್ ಕೋಟಿಗನಹಳ್ಳಿ