ಮೈಸೂರು:ಶ್ರೀ ಛಾಯಾದೇವಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ವಿಜ್ಞಾನ ಸಂಭ್ರಮಾಚರಣೆಯ ಉದ್ಘಾಟನೆಯನ್ನು ಮೈಸೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲ ಸಚಿವರು ಡಾ. ನಾಗರಾಜ ಆಗಮಿಸಿ ಸಾಂಕೇತಿಕವಾಗಿ ಬಿ.ಇಡಿ ವಿದ್ಯಾರ್ಥಿಗಳಿಂದ ಮಾಡಲಾಗಿದ್ದ ರಾಕೆಟ್ ಮಾದರಿಯನ್ನು ಉಡಾವಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಈ ವೇಳೆ ಮಾತನಾತನಾಡಿದ ಅವರು, ಉತ್ತಮ ಶಿಕ್ಷಕರ ಲಕ್ಷಣಗಳು, ಶಿಕ್ಷಕರ ಮೌಲ್ಯಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳಲ್ಲಿ ಪ್ರೋತ್ಸಾಹಿಸಿದರು. ಉತ್ತಮ ಶಿಕ್ಷಕರಾಗಲು ಮೌಲ್ಯಗಳು ಎಷ್ಟು ಮುಖ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬುವುದು ಎಷ್ಟು ಮುಖ್ಯ ಎಂಬುದರ ಕುರಿತು ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಕರ ನಡವಳಿಕೆಯ ಬಗ್ಗೆ ವಿವರಿಸಿದರು.

ಪ್ರಾಂಶುಪಾಲ ಡಾ. ಅಂತೋಣಿ ಪಾಲರಾಜ್ ಮಾತನಾಡಿ, ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯವೈಕರಿಯ ಬಗ್ಗೆ ಹಾಗೂ ವಿದ್ಯಾರ್ಥಿ ಪರ ಆಡಳಿತ ಮಂಡಳಿ ಕುಲಪತಿ, ಕುಲ ಸಚಿವರು ಹಾಗೂ ಸಿಬ್ಬಂದಿ ವರ್ಗದವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ವಿಚಾರಗಳನ್ನು ಯಾವ ರೀತಿಯ ಪಾತ್ರವನ್ನು ನಿರ್ವಹಿಸುತ್ತದೆ ಎಂಬುದನ್ನು ತಿಳಿಸಿದರು.

ವಿವಿಧ ಭಾಷೆಯ ಮಹತ್ವವನ್ನು ಸಾರಾಂಶಿಸಿದರು. ಪ್ರಥಮ ಮತ್ತು ದ್ವಿತೀಯ ಬಿ ಇಡಿ ವಿದ್ಯಾರ್ಥಿಗಳು ವಿವಿಧ ಭಾಷೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಾಗಿದ್ದರು.