ಚಿಕ್ಕಮಗಳೂರು – ಆಕಸ್ಮಿಕ ಬೆಂಕಿ ಅವಘಡ-ಮನೆ ಸಂಪೂರ್ಣ-ಸುಟ್ಟು ಭಸ್ಮ

ಚಿಕ್ಕಮಗಳೂರು – ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ.

ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದಲ್ಲಿ ಮನೆಯಲ್ಲಿ ಇದ್ದ ರೇಖಾ (36) ತೀವ್ರವಾಗಿ ಗಾಯಗೊಂಡು, ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಡಿಗೆಗೆ ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

× How can I help you?