ತುಮಕೂರು ಕೃಷಿ ಇಲಾಖೆ, ಕೃಷಿ ಪದವೀದರ ಅಧಿಕಾರಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಶ್ರೀ ಸಿದ್ದಗಂಗಾ ಮಠದ ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಜಂಟಿ ಕೃಷಿ ನಿರ್ದೇಶಕರ ಕಚೇರಿ, ತುಮಕೂರು ಹಾಗೂ ಮಧುಗಿರಿಯ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಕೃಷಿ ಪರಿಕರ ಸರಬರಾಜುದಾರರು ಹಾಗೂ ವಿತರಕರು ಈ ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.
ಶಿಬಿರದಲ್ಲಿ ರಕ್ತ ಸಂಗ್ರಹಣೆ ಮತ್ತು ವಿತರಣಾ ವಾಹನದ ಮೂಲಕ ಅಗತ್ಯ ಮಂದಿಗೆ ಪೂರೈಸಲು ರಕ್ತ ಸಂಗ್ರಹಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಕೃಷಿ ಇಲಾಖೆಯ ಸಾಮಾಜಿಕ ಜವಾಬ್ದಾರಿಯನ್ನು ಪರಿಗಣಿಸಿ, ಜಿಲ್ಲಾ ಆಸ್ಪತ್ರೆಯ ವತಿಯಿಂದ ಕೃಷಿ ಇಲಾಖೆಗೆ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.