ಹಾಸನ – ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿAದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರೀಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ.
ಈ ನಿಟ್ಟಿನಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.