ಪ್ರಕರಣ ಮುಚ್ಚಿ ಹಾಕುವ ಹುನ್ನಾರ ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಎಚ್.ಡಿ.ಕೋಟೆ: ಗುರುಬ್ರಹ್ಮ, ಗುರು ವಿಷ್ಣು, ಮಹೇಶ್ವರ ಎಂದು ಶಿಕ್ಷಕರಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದರೆ, ಕೆಲವು ಕಾಮುಕ ಶಿಕ್ಷಕರಿಂದ ಇಡೀ ಶಿಕ್ಷಕ ವೃಂದವೇ ತಲೆ ತಗ್ಗಿಸುವಂತಾಗಿದೆ.
ಪಾಠ ಮಾಡಬೇಕಿದ್ದ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಕಳೆದ ಹಲವು ತಿಂಗಳುಗಳಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಮುಖ್ಯಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದಾಗಿ ತಿಳಿದು ಬಂದಿದೆ.
ಕಳೆದ 7 ತಿಂಗಳ ಹಿಂದೆ ಬೇರೆ ಶಾಲೆಯಿಂದ ಕೃತ್ಯ ನಡೆದಿರುವ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಗಿರೀಶ್,
ಕಳೆದ ಹಲವು ದಿನಗಳಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರಿಗೆ ಪೌಷ್ಠಿಕಾಂಶ ಮಾತ್ರೆ ನೀಡುತ್ತೇನೆ ಎಂದು ಪ್ರಜ್ಞೆ ತಪ್ಪಿಸುವ ಮಾತ್ರೆಗಳನ್ನು ನೀಡಿ, ಇಬ್ಬರು ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಡಿ. ಮೊದಲನೇ ವಾರದಲ್ಲಿ ಜಂತುಹುಳು ಮಾತ್ರೆ ನೀಡಲಾಗಿದೆ. ಫೆ.12 ರಂದು ಕಬ್ಬಿಣಾಂಶದ ಮಾತ್ರೆಗಳನ್ನು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ನೀಡಲಾಗಿದೆ. ಈ ಕಾಮುಕ ಮುಖ್ಯ ಶಿಕ್ಷಕ ಬೇರೆ ಮಾತ್ರೆಗಳನ್ನು ನೀಡಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಶಾಲಾ ಕೊಠಡಿಯಲ್ಲಿ ಕಚೇರಿ (ಬೀರು) ಕಪಾಟುಗಳನ್ನು ಮರೆ ಮಾಚಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ ಹಿಂಶಿಸಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದರೂ, ಆರೋಪಿಯನ್ನು ಬಂಧಿಸಲು ತಡವಾಗುತ್ತಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು.
ಈ ಕೂಡಲೇ ಆರೋಪಿಯನ್ನು ಬಂಧಿಸಿ ಗಲ್ಲುಶಿಕ್ಷಗೆ ಒಳಪಡಿಸಬೇಕು. ಇಲ್ಲದಿದ್ದರೆ ಆರೋಪಿಯನ್ನು ನಮ್ಮ ವಶಕ್ಕೆ ನೀಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-ಶಿವಕುಮಾರ ಕೋಟೆ