ಚಿಕ್ಕಮಗಳೂರು-ಮೂಲಕಸುಬು-ವೃತ್ತಿಗೆ-ಕೇಂದ್ರ-ಸರ್ಕಾರ- ಸಾಲಸೌಲಭ್ಯ-ಮಹೇಶ್

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪಿಎಂ ವಿಶ್ವಕರ್ಮ ಯೋಜನೆ ಯಡಿ ಸಾವಿರಕ್ಕೂ ಹೆಚ್ಚು ಜಿಲ್ಲೆಯ ಫಲಾನುಭವಿಗಳಿಗೆ ಸುಮಾರು13.5ಕೋಟಿ ರೂ.ಗಳ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಸಬಲರಾಗಲು ಪ್ರೋತ್ಸಾಹ ನೀಡಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಹೇಶ್ ಹೇಳಿದರು.


ನಗರದ ಬಸವನಹಳ್ಳಿ ಸಮೀಪ ವಿಶ್ವಕರ್ಮ ಸಮುದಾಯ ಭವನದಲ್ಲಿ ಎಂ.ಎಸ್.ಎಂ.ಇ. ಅಭಿವೃದ್ದಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಏರ್ಪಡಿಸಿದ್ಧ ಪಿಎಂ ವಿಶ್ವಕರ್ಮ ಯೋಜನೆ ಕಾರ್ಯಾಗಾರವನ್ನು ಮ ಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪೂರ್ವಿಕರ 18ಕ್ಕೂ ಹೆಚ್ಚು ಮೂಲಕಸುಬನ್ನು ಮಾಡಿಕೊಂಡು ಬಂದಿರುವ ಜನಾಂಗಕ್ಕೆ ಪ್ರಸ್ತುತ ಆರ್ಥಿಕ ಸಹಾಯಹಸ್ತ ಇರಲಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಕೂಲಂಕುಶವಾಗಿ ಪರಿಶೀಲಿಸಿ ಮೂಲ ಕಸು ಬನ್ನು ಉಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆ ಜಾರಿಗೆ ತಂದು ತರಬೇತಿ ನಂತರ ಆರ್ಥಿಕ ಸಹಾಯ ಧನ ಒದಗಿಸುತ್ತಿದೆ ಎಂದರು.


ಮೂಲ ಕಸುಬುದಾರರು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹರಿಗೆ ತರಬೇತಿ ನ ಡೆಸಿ ಪ್ರಮಾಣ ಪತ್ರ ವಿತರಿಸಲಾಗುವುದು. ತದನಂತರ ಬ್ಯಾಂಕ್‌ನಿಂದ ವಾರ್ಷಿಕ ಶೇ.೫ರ ಬಡ್ಡಿದರ ದಲ್ಲಿ 5೦ ಸಾವಿರದಿಂದ 2 ಲಕ್ಷದವರೆಗೆ ಕಸುಬಿನ ಪರಿಕರ ಖರೀದಿಸಲು ಸಾಲದ ರೂಪದಲ್ಲಿ ವಿತರಿಸುವ ಯೋಜನೆ ಇದಾಗಿದೆ ಎಂದು ತಿಳಿಸಿದರು.


ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವವರು ಕೇಂದ್ರದ ಮುದ್ರಾ ಸೇರಿದಂತೆ ಯಾವುದೇ ಯೋಜನೆ ಯಲ್ಲಿ ಸಾಲ ಪಡೆದಿರಬಾರದು. ಕುಟುಂಬದ ಏಕಮಾತ್ರ ಸದಸ್ಯನಿಗೆ ಈ ಸೌಲಭ್ಯ ಅನ್ವಯ ಹಾಗೂ ಸರ್ಕಾ ರಿ ಹುದ್ದೆ ಹೊಂದಿರುವ ವ್ಯಕ್ತಿಗೆ ಸೌಲಭ್ಯ ಲಭಿಸುವುದಿಲ್ಲ. ಸಾಲ ಪಡೆದುಕೊಂಡ ಫಲಾನುಭವಿಗಳು ಸಮ ಯಕ್ಕೆ ಮರುಪಾವತಿಗೆ ಮುಂದಾದರೆ ಹೆಚ್ಚಿನ ಮೊತ್ತದಲ್ಲಿ ಸಾಲ ವಿತರಿಸಲಾಗುತ್ತದೆ ಎಂದರು.


ಎಂ.ಎಸ್.ಎಂ.ಇ. ಸಂಸ್ಥೆ ಸಹಾಯಕ ನಿರ್ದೇಶಕ ಜಿ.ನಾಗರಾಜ್ ಮಾತನಾಡಿ ವಿಶ್ವಕರ್ಮ ಯೋಜನೆ ಯಲ್ಲಿ ಫಲಾನುಭವಿಗಳಿಗೆ ಯಾವುದೇ ಭದ್ರತೆ ಇಲ್ಲದೇ, ನಿಯಮಿತ ದಾಖಲಾತಿಗಳ ಮುಖಾಂತರ ಸಾಲ ನೀಡುವ ಉದ್ದೇಶ ವೃತ್ತಿ ಕೌಶಲ್ಯತೆ ನಶಿಸದಂತೆ. ಹೀಗಾಗಿ ಪ್ರಧಾನ ಮಂತ್ರಿಗಳು ಈ ಮಹತ್ವಾ ಪೂರ್ಣ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.


ಪಿಎಂ.ವಿ ಯೋಜನೆ ಜಿಲ್ಲಾ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ ಮೂಲಕಸಬು ಉಳಿಸುವ ನಿಟ್ಟಿ ನಲ್ಲಿ ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಅನುಷ್ಟಾನಗೊಳಿಸಿದೆ. ಆದರೆ ಕೆಲವು ಬ್ಯಾಂಕ್‌ಗಳು ಆರಂಭದಲ್ಲಿ 1 ಲಕ್ಷ ಸಾಲ ವಿತರಿಸುವ ಬದಲಾಗಿ, ಕೇವಲ 5೦ ಸಾವಿರ ಸಾಲ ವಿತರಿಸುತ್ತಿರುವುದು ಸರಿಯಲ್ಲ. ಕೇಂದ್ರ ಆದೇಶನ್ವಯದಂತೆ ಬ್ಯಾಂಕ್ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎಸ್.ಎಂ.ಇ. ಸಂಸ್ಥೆ ಜಂಟಿ ನಿರ್ದೇಶಕ ಎಂ. ಶಶಿಕುಮಾರ್ ದೇಶದಾದ್ಯಂತ ಮೂಲ ಕಸುಬುದಾರರ ಜೀವನ ಭದ್ರತೆ ಸುಧಾರಿಸಲು ಕೇಂದ್ರ ಸರ್ಕಾರಿ 13 ಸಾವಿರ ಕೋಟಿ ವಿಶ್ವಕರ್ಮ ಯೋಜನೆಗೆ ಅನುದಾನ ಮೀಸಲಿಟ್ಟಿದೆ. ರಾಜ್ಯದಲ್ಲೂ ಈ ಯೋಜನೆ ಅಭಿವೃಧ್ದಿಗೆ ಹೆಚ್ಚಿನ ಒತ್ತು ನೀಡಿ, ಮೂಲಕಸುಬುದಾರರಿಗೆ ಸಹಾಯಹಸ್ತ ಚಾಚಿದೆ ಎಂದರು.


ಈ ಸಂದರ್ಭದಲ್ಲಿ ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್, ಜಿಲ್ಲಾ ಡಿಐಸಿ ಉಪನಿರ್ದೇಶಕ ಮಹೇಶ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಶಾಂತ್, ಸಿಎಸ್‌ಸಿ ಜಿಲ್ಲಾ ಸಂಯೋಜಕ ವಿಜಯಕುಮಾರ್, ಡಿಪಿಎಂಯು ರಾಕೇಶ್ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

  • ಸುರೇಶ್‌ ಎನ್.

Leave a Reply

Your email address will not be published. Required fields are marked *

× How can I help you?