ಮೈಸೂರು – ತಾಲ್ಲೂಕಿನ ಜಯಪುರ ಹೋಬಳಿಯ ಮುರುಡಗಳ್ಳಿ ಗ್ರಾಮದ ಶ್ರೀ ಬಸವ ಸಂಗಮೇಶ್ವರ ವಿರಕ್ತಮಠದ ನೂತನ ಕಟ್ಟಡ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ವೈಭವ ಪೂರಿತವಾಗಿ ಜರುಗಿತು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಕಂಬಳೀಶ್ವರ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಅಡವಿ ವಿರಕ್ತಮಠದ ಶ್ರಿ ಶಿವಲಿಂಗೇಂದ್ರ ಸ್ವಾಮೀಜಿ, ಶ್ರೀ ವಿರಕ್ತಮಠದ ಶ್ರೀ ತೋಂಟದಾರ್ಯ ಸ್ವಾಮೀಜಿ ಶ್ರೀ ವಿರಕ್ತಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ, ಶ್ರೀ ವಿರಕ್ತಮಠದ ಶ್ರೀ ಇಮ್ಮಡಿ ಚನ್ನಮಲ್ಲದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ಯಶಸ್ವಿಯಾಗಿ ಜರುಗಿದವು.
ಶಾಸಕರಾದ ಜಿ.ಟಿ.ದೇವೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬಿಜೆಪಿ ಮುಖಂಡ ಕವೀಶ್ ಗೌಡ ಸೇರಿ ಅನೇಕ ಗಣ್ಯರು ನೂತನ ಮಠ ಸ್ಥಾಪನೆಗೆ ಶುಭಕೋರಿದರು.

ಈ ವೇಳೆ ನೂತನ ಮುರುಡಗಳ್ಳಿ ಗ್ರಾಮದ ನೂತನ ವಿರಕ್ತಮಠದ ಪೀಠಾಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ ಕಾರ್ಯಕ್ರಮ ಕುರಿತು ಮಾತನಾಡಿ, ನಾನು ಪಿಯುಸಿ ಮಾಡುತ್ತಿದ್ದು, ಪೀಠಾಧ್ಯಕ್ಷನಾಗಿರುವ ಸಂತಸವಿದೆ. ಮುಂದಿನ ದಿನಗಳಲ್ಲಿ ದಾಸೋಹ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಮಾಜ ಸೇವೆ ಮಾಡುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.