ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಮತ ಬ್ಯಾಂಕ್ ರಾಜಕಾರಣಕ್ಕೋಸ್ಕರ ಅಲ್ಪಸಂಖ್ಯಾತರನ್ನು ಓಲೈಸಿರುವ ಹಿಂದೂ ವಿರೋಧಿ ಎಂದು ತಮ್ಮನ್ನು ಸಾಬೀತು ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಬಜೆಟ್‌ನಲ್ಲಿ ರೈತರು, ದಲಿತರು, ಜನಸಾಮಾನ್ಯರ ಹಿತವನ್ನು ಧಿಕ್ಕರಿಸಿ ವಂಚಿಸಿದ್ದಾರೆ ಎಂದು ಟೀಕಿಸಿದರು.
ಡಾ.ಬಿ.ಆರ್.ಅಂಬೇಡ್ಕರ್‌ಅವರಿಗೆ ಮೋಸ ಮಾಡಿ, ಅವರು ರಚಿಸಿದ ಸಂವಿಧಾನಕ್ಕೆ ಕಾಂಗ್ರೆಸ್‌ನವರು ಅಪಚಾರ ಮಾಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ದಲಿತರಿಗೆ ಯಾವುದೇ ವಿಶೇಷ ಸೌಲಭ್ಯ ಘೋಷಣೆ ಮಾಡದೆ ದಲಿತರ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ.ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಾದ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ದಲಿತರಿಗೆ ನೀಡಬೇಕಾದ ಆದ್ಯತೆ ನೀಡಲ್ಲ, ಹಿಂದೂ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ ಮಾತನಾಡಿ,ತಾವು ಅಹಿಂದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಇದರಲ್ಲಿ ದಲಿತರು, ಹಿಂದುಳಿದವರನ್ನು ಕಡೆಗಣಿಸಿ ಅಲ್ಪಸಂಖ್ಯಾತರನ್ನೇ ಓಲೈಸುತ್ತಿದ್ದಾರೆ. ಅತಿ ಹೆಚ್ಚಿನ ಜನಸಂಖ್ಯೆ ಇರುವ ಹಿಂದುಳಿದ ವರ್ಗಗಳಿಗೆ ಬಜೆಟ್‌ನಲ್ಲಿ ನ್ಯಾಯ ಒದಗಿಸಿಲ್ಲ ಎಂದು ಟೀಕಿಸಿದರು.
ಈ ವೇಳೆ ಬಿಜೆಪಿ ಹಿರಿಯ ಮುಖಂಡರಾದ ಹೆಚ್.ಎಂ.ರವೀಶಯ್ಯ, ಸತ್ಯಮಂಗಲಜಗದೀಶ್, ಸಿ.ಎನ್.ರಮೇಶ್, ವಿಷ್ಣುವರ್ಧನ್, ಪುಟ್ಟರಾಜು, ಗಣೇಶ್‌ಪ್ರಸಾದ್, ಧನುಷ್, ಮೊದಲಾದವರು ಭಾಗವಹಿಸಿದ್ದರು.
- ಕೆ.ಬಿ.ಚಂದ್ರಚೂಡ