ತುಮಕೂರು – ನಗರದ ವಿಘ್ನೇಶ್ವರ ಕಂಫರ್ಟ್ಸ್‌ನ ಸಭಾಂಗಣದಲ್ಲಿ ಮಾರ್ಚ್ 12 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಸೇನೆ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರದ ಕುಂಚಿಟಿಗರ ಮಹಾ ಸಂಸ್ಥಾನ ಮಠಧ್ಯಾಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು.
ವಿಘ್ನೇಶ್ವರ ಮುಂಜಾನೆ ಗೆಳೆಯರ ಬಳಗದ ಗೌರವಾಧ್ಯಕ್ಷ ಎಂ.ಕೆ. ವೆಂಕಟಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ಧನಿಯಾಕುಮಾರ್ ಅಧ್ಯಕ್ಷತೆ ವಹಿಸುವರು.

ಶ್ರೀ ಮಾಚಿದೇವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶಾಂತಕುಮಾರ್, ಮಾಜಿ ನಗರಸಭಾಧ್ಯಕ್ಷರಾದ ಟಿ.ಪಿ. ಮಂಜುನಾಥ್, ಮಡಿವಾಳ ಸಮಾಜದ ಅಧ್ಯಕ್ಷರಾದ ಲಕ್ಷ್ಮಣ್ ಇವರಗಳನ್ನು ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷರಾದ ಎಸ್.ಜಿ. ಚಂದ್ರಮೌಳಿ ರವರು ಸನ್ಮಾನಿಸಿ ಅಭಿನಂದಿಸುವರು ಎಂದು ತಿಳಿಸಿದರು.