ಕೆ.ಆರ್.ಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದ ಕಾಳಮ್ಮನ ಬೀದಿಯ ನಿವಾಸಿ ಮಹೇಶ್ ಅವರ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಗ್ನಿ ಅನಾಹುತ ಸಂಭವಿಸಿ ಮನೆಯು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ.
ಘಟನೆಯಿಂದ ಮನೆಯ ಮೇಲ್ಚಾವಣಿ ಹಾಗೂ ಮನೆಯಲ್ಲಿದ್ದ ದಿನ ಬಳಕೆಯ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೆಂಕಿ ಅವಘಡ ಸಂಭವಿಸಿದ ವೇಳೆ ಅಕ್ಕಪಕ್ಕದ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಉಂಟಾಗುವುದನ್ನು ತಪ್ಪಿಸಿದ್ದಾರೆ. ಮನೆಯಲ್ಲಿ ನೀರು ತಂದು ಹಾಕುವ ಮೂಲಕ ಬೆಂಕಿಯನ್ನು ನಂದಿಸಿ ಅಕ್ಕಪಕ್ಕದ ಮನೆಗೆ ಬೆಂಕಿ ಹೊತ್ತಿಕೊಳ್ಳದಂತೆ ತಡೆಯುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ವಿದ್ಯುತ್ ಅವಘಡದಿಂದ ಮನೆಯನ್ನು ಕಳೆದುಕೊಂಡು ನಷ್ಟಕ್ಕೆ ಒಳಗಾಗಿರುವ ಮಹೇಶ್ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಹೊಸಹೊಳಲು ಗ್ರಾಮಸ್ಥರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
- ಶ್ರೀನಿವಾಸ್ ಆರ್.