ಆಲೂರು:ಮಕ್ಕಳಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ ಸೂಕ್ತ ವೇದಿಕೆಯನ್ನು ಒದಗಿಸಿ ಪ್ರತಿಭೆಯನ್ನು ಹೊರ ತೆಗೆಯುವ ಪ್ರಾಮಾಣಿಕ ಪ್ರಯತ್ನವಾಗಬೇಕು ಎಂದು ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕ ಗೋವಿಂದೇಗೌಡ ಅಭಿಪ್ರಾಯ ಪಟ್ಟರು .
ಅವರು ಆಲೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2024-25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣ ಹಾಗೂ ಉತ್ತೇಜನ ನೀಡುವುದು ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜನೆಯ ಪ್ರಮುಖ ಅಂಶವಾಗಿದೆ.ಶಿಕ್ಷಣ ಮಕ್ಕಳ ವಿದ್ಯಾರ್ಜನೆಗೆ ಮಾತ್ರ ಸೀಮಿತವಾಗಿರದೆ ಅವರಲ್ಲಿನ ಪ್ರತಿಭೆ ಹೊರಹಾಕಿ ವಿಕಾಸ ಹೊಂದಲು ಸಹಾಯ ಮಾಡುವುದು.
ಸಂವಿಧಾನದ ಪ್ರತಿ ಮಗು ಶಿಕ್ಷಣ ಹೊಂದುವ ಹಕ್ಕನ್ನು ಕೊಟ್ಟಿದ್ದು ಅದರಂತೆ ಪ್ರತಿ ಮಗುವಿಗೆ ಶಿಕ್ಷಣ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಮುಖ ಪಾತ್ರವಹಿಸಿದೆ.ಪಾಲಕರು ಸರ್ಕಾರದ ಜೊತೆ ಕೈಜೋಡಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿದಾಗ ಸರ್ಕಾರದ ಪ್ರಯತ್ನ ಕೈಗೂಡುತ್ತದೆ.ಇಲ್ಲಿ ಭಾಗವಹಿಸಿರುವ ಮಕ್ಕಳು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತಾಗಬೇಕು ಎಂದರು.
ಮುಖ್ಯ ಶಿಕ್ಷಕಿ ದ್ರಾಕ್ಷಾಯಿಣಿ ಮಾತನಾಡಿ ಶಿಕ್ಷಣ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾ ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಸೋಲು ಗೆಲುವಿನ ಬಗ್ಗೆ ಯೋಚಿಸದೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಈ ಪ್ರತಿಭಾ ಕಾರಂಜಿ ವೇದಿಕೆಯನ್ನು ಬಳಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ದ್ರಾಕ್ಷಾಯಿಣಿ, ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲಾ ಭೂಪಾಲಯ್ಯ,ಶಿಕ್ಷಣ ಸಂಯೋಜಕ ರವಿಕಿರಣ್, ಎಸ್ ಟಿ ಎಂ ಸಿ ಅಧ್ಯಕ್ಷ ಕಿರಣ್,ಸಂಪನ್ಮೂಲ ವ್ಯಕ್ತಿ ಸುಮಾ,ಶಿಕ್ಷಕ ಧರ್ಮ,ಸಹ ಶಿಕ್ಷಕಿಯರಾದ ಗಾಯಿತ್ರಿ, ವೆಂಕಟರಂಗಯ್ಯ ರಂಗನಾಥ, ರಂಜಿತಾ,ಧನಂಜಯ, ಎಲಿಜಬತ್, ಹಾಗೂ ಇತರರು ಉಪಸ್ಥಿತರಿದ್ದರು.
—————-ಧರ್ಶನ ಕೆರೇಹಳ್ಳಿ