ಮಂಡ್ಯ– ಬಿ.ಹೊಸೂರು ಗ್ರಾಮದ ಕುಮಾರ್ ರವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಡಿಯುತ್ತಿದ್ದ ಸಂದರ್ಭದಲ್ಲಿ 3 ಚಿರತ ಮರಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದಾಗ ಜಮೀನಿನಲ್ಲಿ ಬೋನ್ ಇಟ್ಟಿದ್ದು, ಶನಿವಾರದಂದು ಬೋನಿಗೆ 3 ಚಿರತೆ ಮರಿ ಸೆರೆ ಸಿಕ್ಕಿದ್ದು ಇಂದು ಮುಂಜಾನೆ ಬೆಳ್ಳಿಗೆ 7 ಗಂಟೆ ಸಮಯದಲ್ಲಿ ತಾಯಿ ಚಿರತೆ ಬೋನಿಗೆ ಬಿದ್ದಿದ್ದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವ್ ಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶೈಲಜಾ, ಉಪವಲಯ ಅರಣ್ಯ ಅಧಿಕಾರಿ ಕುಮಾರ್, ಗಸ್ತು ಅರಣ್ಯ ಪಾಲಕರಾದ ಲೋಕೇಶ್,ರವಿಕುಮಾರ್, ಬಳ್ಳಯ್ಯ, ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, 7 ದಿನಗಳಲ್ಲಿ 4 ನೇ ಬಾರಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆಯ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
