ಕೆ.ಆರ್.ಪೇಟೆ: ಮನ್ಮುಲ್ ನಿರ್ದೇಶಕ ಡಾಲು ರವಿ ಅವರ ಹುಟ್ಟುಹಬ್ಬದ ಹಿನ್ನಲೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಡಾ ಕೆ.ಎಸ್ ಪ್ರಭಾಕರ್ ನೇತೃತ್ವದಲ್ಲಿ ಕಿಕ್ಕೇರಿ ಪಟ್ಟಣಸ ಅರಳಿಕಟ್ಟೆ ಆವರಣದಲ್ಲಿ ಬೃಹತ್ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ ಕೆ.ಎಸ್.ಪ್ರಭಾಕರ್ , ಸತತ ಮೂರನೇ ಭಾರಿಗೆ ಮನ್ ಮುಲ್ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಡಾಲು ರವಿ ಅವರು ಕಳೆದ ನಾಲ್ಕು ವರ್ಷಗಳಿಂದ ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಸುಮಾರು 20ರಿಂದ 30ಸಾವಿರ ಮಂದಿಗೆ ಪ್ರತಿ ವರ್ಷವೂ ಅನ್ನಧಾನ ಮಾಡುತ್ತಾ ಬಂದಿದ್ದಾರೆ. ಇದರ ಪ್ರತಿಫಲವಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಉತ್ತಮ ಸ್ಥಾನ, ಅಧಿಕಾರವು ಡಾಲು ರವಿ ಅವರಿಗೆ ಸಿಗಲಿ ಎಂದು ಅಣ್ಣನ ಸ್ಥಾನದಲ್ಲಿ ನಿಂತು ಶುಭ ಹಾರೈಸುವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿ. ಪಂ ಮಾಜಿ ಉಪಾಧ್ಯಕ್ಷ ಕೆ. ಎಸ್ ಪ್ರಭಾಕರ್,ತಾ ಪಂ ಮಾಜಿ ಉಪಾಧ್ಯಕ್ಷ ವಡ್ಡರಹಳ್ಳಿ ರವಿ, ಕಿಕ್ಕೇರಿ ಗ್ರಾ.ಪಂ ಅಧ್ಯಕ್ಷ ಕೋಳಿ ಕೃಷ್ಣಪ್ಪ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪರಮೇಶ್, ರಾಜೇಶ್, ಕೆ ಜಿ ಪುಟ್ಟರಾಜು,ಸೊಳ್ಳೇಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಣ ಶೆಟ್ಟಿಹಳ್ಳಿ ಕೃಷ್ಣೇಗೌಡ,ಯುವ ಮುಖಂಡ ಹೂವಿನ ಸುನಿಲ್, ಸೇರಿದಂತೆ ನೂರಾರು ಯುವಕರು ಹಲವಾರು ಮುಖಂಡರು ಉಪಸ್ಥಿತರಿದ್ದರು.
-ಶ್ರೀನಿವಾಸ್ ಆರ್.