ಬೇಲೂರು– ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡ ಬೆನ್ನಲ್ಲೇ, ನಾಳೆಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿರುವುದರಿಂದ ಇಂದು ಬೇಲೂರು ತಹಶೀಲ್ದಾರ್ ಎಂ ಮಮತ ರವರು ಪರೀಕ್ಷಾ ಕೇಂದ್ರಗಳನ್ನು ಪರಿಶೀಲನೆ ನಡೆಸಿದರು.
ಪರಿಶೀಲನೆಯ ಸಂದಭ೯ದಲ್ಲಿ ಸಾವ೯ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯಾಗಬೇಕು.ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾಥಿ೯ಗಳಿಗೆ ಗೋಚರವಾಗುವ ರೀತಿ ಪ್ರದಶ೯ನವಾಗಬೇಕ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉತ್ತಮ ಗಾಳಿ-ಬೆಳಕಿನ ವ್ಯವಸ್ಥೆ ಇರಬೇಕು. ಕುಡಿಯುವ ನೀರು,ಶೌಚಾಲಯ,ಸ್ವಚ್ಚತಾ ಕಾರ್ಯಗಳು ವ್ಯವಸ್ಥಿತವಾಗಿರಬೇಕು.ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅವಶ್ಯ ಸೌಲಭ್ಯಗಳನ್ನು ನೀಡಬೇಕು.
ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸಬೇಕು.ಈಗಾಗಲೇ ಅಳವಡಿಸಿರುವ ಕ್ಯಾಮೆರಾಗಳು ಚಾಲ್ತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು,ಪರೀಕ್ಷೆ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ನಿರಂತರವಾಗಿ ವಿದ್ಯುತ್ ಸರಬರಾಜು ವ್ಯವಸ್ಥೆ ಇರಬೇಕು.ಪರೀಕ್ಷಾ ಕೇಂದ್ರಗಳಲ್ಲಿನ ಯು.ಪಿ.ಎಸ್‍ಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು.ಪರೀಕ್ಷಾ ಅಕ್ರಮಗಳನ್ನು ತಡೆಯಲು ರಚಿಸಲಾಗಿರುವ ಸ್ಥಾನಿಕ ಜಾಗೃತ ದಳ ಪಾರದರ್ಶಕವಾಗಿ ಕಾರ್ಯಾಚರಣೆ ನಡೆಸಬೇಕು.ಪರೀಕ್ಷಾ ಕೇಂದ್ರಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಬೇಕೆಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ರೇವಣ್ಣ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.