ಎಚ್.ಡಿ.ಕೋಟೆ: ಮಾ.25 ರಂದು ಮಂಗಳವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಜಿಲ್ಲಾ ಪ್ರಧಾನ ಸಂಚಾಲಕ ಮಲ್ಲಳ್ಳಿ ನಾರಾಯಣ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್ ನಲ್ಲಿ 1927 ಮಾರ್ಚ್ 20 ರಂದು ಸಾರ್ವಜನಿಕ ಕೆರೆಯ ನೀರನ್ನು ಮುಟ್ಟುವ ಮೂಲಕ ನೈಸರ್ಗಿಕ ಸಂಪತ್ತು ಎಲ್ಲರಿಗೂ ಸೇರಿದ್ದು ಎನ್ನುವುದನ್ನು ಸಾರಿ ಹೇಳಿದರು. ಆ ಮೂಲಕ ಮಾನವ ಹಕ್ಕುಗಳನ್ನು ಎತ್ತಿ ಹಿಡಿದರು, ಇದರ ನೆನಪಿಗಾಗಿ ಮಹಾಡ್ ಸತ್ಯಾಗ್ರಹ ಆಧುನಿಕ ಭಾರತ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು ಘಟನೆಯಾಗಿದೆ ಎಂದರು.
ಇದರ ಆಚರಣೆಗಾಗಿ ಮಾ. 25 ಮಂಗಳವಾರ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಶೋಷಿತರ ಸಂಘರ್ಷ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪ್ರಧಾನ ಸಂಚಾಲಕ ಮಲ್ಲಳ್ಳಿ ನಾರಾಯಣ್ ವಯಸ್ಸಲ್ಲಿದ್ದಾರೆ.

ಜ್ಞಾನ ಪ್ರಕಾಶ ಸ್ವಾಮೀಜಿ ಯವರ ಕಾರ್ಯಕ್ರಮದ ಘನ ಉಪಸ್ಥಿತಿ ಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಚಿತ್ರನಟ ಅಹಿಂಸ ಚೇತನ್, ಪ್ರಗತಿಪರ ಚಿಂತಕ ಜನಾರ್ದನ್ (ಜನ್ನಿ), ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಇನ್ನೂ ಹಲವಾರು ಪ್ರಮುಖರು ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ತಾಲ್ಲೂಕಿನ ಪ್ರಗತಿಪರ ಚಿಂತಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನ ಸಂಚಾಲಕ ದೊಡ್ಡಸಿದ್ದು ಹಾದನೂರು, ಜಿಲ್ಲಾ ದಲಿತ ಮಹಿಳಾ ಒಕ್ಕೂಟದ ಸಂಚಾಲಕಿ ಕಟ್ಟೆಮಳವಾಡಿ ಮಹದೇವಮ್ಮ, ತಾಲೂಕು ಸಂಚಾಲಕ ಸಣ್ಣ ಕುಮಾರ್, ಜಿಲ್ಲಾ ಸಂಘಟನ ಸಂಚಾಲಕಿ ಅನುಷಾ, ಸರಗೂರು ತಾಲ್ಲೂಕು ಪ್ರಧಾನ ಸಂಚಾಲಕ ಕೂಡಗಿ ಗೋವಿಂದರಾಜು, ದಲಿತ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಂಚಾಲಕ ದಮ್ಮ ಅಶೋಕ, ಕಾಳಪ್ಪಾಜಿ, ಚಂದ್ರು ಹಾದನೂರು, ಉದಯ ಕೋಟೆ, ಕುರ್ಣೇಗಾಲ ಕೃಷ್ಣ, ಕೂಲ್ಯ ಮಹಾದೇವಸ್ವಾಮಿ ಇದ್ದರು.
- ಶಿವ ಕುಮಾರ , ಹೆಚ್.ಡಿ.ಕೋಟೆ