ಚಿಕ್ಕಮಗಳೂರು-ಭಯಮುಕ್ತರಾಗಿ-ಪರೀಕ್ಷೆ-ಎದುರಿಸಲು-ಕಾರ್ಯಗಾರ-ಸಹಕಾರಿಯಾಗಲಿದೆ-ಕರ್ನಾಟಕ-ಬ್ಯಾಂಕ್ ನ-ಪ್ರಧಾನ- ವ್ಯವಸ್ಥಾಪಕ-ಸುಬ್ರಮಣ್ಯ ಭಾರ್ವೆ


ಚಿಕ್ಕಮಗಳೂರು- ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಮತ್ತು ಅವರನ್ನು ಪರೀಕ್ಷಾ ಭಯದಿಂದ ವಿಮೋಚನೆಗೊಳಿಸಲು ಈ ಕಾರ್ಯಗಾರ ಸಹಕಾರಿಯಾಗಲಿದೆ ಎಂದು ಕರ್ನಾಟಕ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಾರ್ವೆ ಅವರು ಅಭಿಪ್ರಾಯಸಿದರು.

ನಗರದ ಸಹ್ಯಾದ್ರಿ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಬ್ಯಾಂಕಿಂಗ್ ಪರೀಕ್ಷೆಗಳ ಉಚಿತ ಕಾರ್ಯಗಾರದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರಸ್ತುತ ವಿದ್ಯಮಾನದಲ್ಲಿ ಜಿಲ್ಲೆಯ ಹಲವಾರು ವಿದ್ಯಾರ್ಥಿಗಳು ಬ್ಯಾಂಕಿAಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಲು ಪ್ರಯತ್ನ ಪಡುತ್ತಿದ್ದು ಅವರಿಗೆ ಬ್ಯಾಂಕಿಂಗ್ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ತರಬೇತಿಯ ಕೊರತೆಯಿದೆ ಅಂಥವರಿಗೆ ಈ ಕಾರ್ಯಗಾರವು ಸಹಕಾರಿಯಾಗಲಿದೆ ಎಂದರು.

ಈ ಕಾರ್ಯಗಾರ ದಿಂದ ಯಾವುದೇ ಭಯವಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಲು ಅನುಕೂಲವಾಗಲಿದ್ದು ವಿದ್ಯಾರ್ಥಿಗಳಲ್ಲಿನ ಬ್ಯಾಂಕಿಂಗ್ ಪರೀಕ್ಷಾ ಭಯವನ್ನು ದೂರ ಮಾಡಿ ಅತ್ಯುತ್ತಮ ರೀತಿಯಲ್ಲಿ ಪರೀಕ್ಷೆ ಬರೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.ಈ ಎರಡು ದಿನದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ನುರಿತ ತರಬೇತುದಾರರಾದ ಆರ್.ಕೆ ಬಾಲಚಂದ್ರ ಅವರ ನೇತೃತ್ವದಲ್ಲಿ ಬ್ಯಾಂಕಿಂಗ್ ಪರೀಕ್ಷೆಯನ್ನು ಎದುರಿಸಲು ತರಬೇತಿ ನೀಡಲಾಗುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸಿದ್ದರಾಗಬೇಕು ಮತ್ತು ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.


ಸಂಸ್ಥೆಯ ಪ್ರಾಂಶುಪಾಲರಾದ ಉಲ್ಲಾಸ್ ಅವರು ಮಾತನಾಡಿ ಬ್ಯಾಂಕಿಂಗ್ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಅರಿವಿನ ಕೊರತೆಯನ್ನು ನೀಗಿಸಲು ಈ ಕಾರ್ಯಗಾರವನ್ನು ಆಯೋಜಿಸಲಾಗಿದ್ದು ಈ ಎರಡು ದಿನದ ಕಾರ್ಯಗಾರವು ವಿದ್ಯಾರ್ಥಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಲಿದೆ ಹಾಗೂ ಇದರಿಂದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಲಗ್ಗೆ ಇಡಲು ಹಲವಾರು ಹೊಸ ಉದ್ಯೋಗಿಗಳಿಗೆ ಈ ಕಾರ್ಯಗಾರ ದಾರಿದೀಪವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಎಜುಕೇಶನ್ ಅಂಡ್ ಚಾರಿಟಬಲ್ ಟ್ರಸ್ಟ್ ನ ಚೇರ್ಮನ್ ಸತೀಶ್,ಎಸ್. ಕಾರ್ಯದರ್ಶಿಗಳಾದ ನಳಿನಿ ಡೀಸಾ, ಪತ್ರಕರ್ತರಾದ ಮಂಜುನಾಥ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಯ ತರಬೇತುದಾರರಾದ ಬಾಲಚಂದ್ರ ಅವರು ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?