ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಮನ್ ಕೀ ಬಾತ್ನ ಉಸ್ತುವಾರಿಗಳ ಕಾರ್ಯಗಾರ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಬುಧವಾರ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯ್ ಕುಮಾರ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಬಿ.ರಾಜಪ್ಪ, ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸೀತರಾಮ ಭರಣ್ಯ, ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ರವೀಂದ್ರ ಬೆಳವಾಡಿ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮತ್ತಿತರರಿದ್ದರು.