ಮೈಸೂರು– ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ವರ್ಕ್ಶಾಪ್‌ನ ಹತ್ತಿರ ಇರುವ ಸ್ನೇಹ ಸಂಗಮ ಗೆಳಯರ ಬಳಗದಿಂದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ೫೦ನೇ ವರ್ಷದ ಜನ್ಮ ದಿನಾಚರಣೆ ಹಾಗೂ ಅನ್ನ ಸಂತರ್ಪಣೆಯನ್ನು ಇಂದು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ-2 ರ ವರ್ಕ್ ಇನ್ಸ್ಪೆಕ್ಟರ್ ಶಿವಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಗದ ರಮೇಶ್, ರಾಜು ಹಾಗೂ ಪದಾಧಿಕಾರಿಗಳನ್ನು ಚಿತ್ರದಲ್ಲಿ ಕಾಣಬಹುದು.