ಕೆ ಆರ್ ಪೇಟೆ: ತಾಲ್ಲೂಕು, ಬೂಕನಕೆರೆ ಹೋಬಳಿ ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾದ ಬಲ್ಲೇನಹಳ್ಳಿ ರಮೇಶ್, ಕಬ್ಬಲಗೆರೆಪುರ ಪುಟ್ಟಸ್ವಾಮಿ ರವರು ಹಾಗೂ ಮುರುಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾದ ಅಗಸರಹಳ್ಳಿ ಗೋವಿಂದರಾಜು ರವರುಗಳು ಸಮಾಜ ಸೇವಕರು, ಕಾಂಗ್ರೆಸ್ ಮುಖಂಡರು ಹಾಗೂ ಮಿತ್ರ ಫೌಂಡೇಶನ್ ಅಧ್ಯಕ್ಷರಾದ ವಿಜಯ್ ರಾಮೇಗೌಡ ರವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಸದಸ್ಯ ಮಾಧವಪ್ರಸಾದ್ (ಸುದಣ್ಣ), ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರ ಬಲ್ಲೇನಹಳ್ಳಿ ರಾಮು, ಕುಮಾರ್ ಹಾಗೂ ಕಾರ್ತಿಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.