ತುಮಕೂರು :ವೀರಶೈವ, ಲಿಂಗಾಯತರಲ್ಲಿ ಐಕ್ಯತೆ ಮತ್ತು ಅಭಿವೃದ್ಧಿ ಕಾಣುವುದೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯಎಂದು ಶ್ರೀಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ(ರಿ) ತುಮಕೂರು ಜಿಲ್ಲಾ ಘಟಕದ ವಸತಿ ವತಿಯಿಂದ ಆಯೋಜಿದ್ದ ಸದಸ್ಯರಿಗೆ ಸೇವಾಧೀಕ್ಷೆ,ಸಾಧಕರಿಗೆ ಸನ್ಮಾನ ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮೊಳಗಿನ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದರು.
ವೀರಶೈವ, ಲಿಂಗಾಯತ ಧರ್ಮದ ಆಚರಣೆ ಇತ್ತಿಚಿನ ದಿನಗಳಲ್ಲಿ ಕಡಿಮೆಯಾಗುತ್ತದೆ.ಅಂಗೈಯಲ್ಲಿ ಲಿಂಗಧರಿಸಿ ನಿತ್ಯವೂ ಪೂಜೆ ಸಲ್ಲಿಸುವ ಸಂಪ್ರದಾಯ ಕಡಿಮೆಯಾಗಿದೆ. ಇನ್ನೊಂದು ಧರ್ಮದ ಅನುಸರಣೆ ಮಾಡುವುದು ಸರಿಯಲ್ಲ. ಸತ್ಯ ನಾರಾಯಣ ಪೂಜೆಗೆ, ಲಿಂಗಾಯಿತ, ವೀರಶೈವರಿಗೂ ಸಂಬAಧವೇನು ಎಂದು ಪ್ರಶ್ನಿಸಿದ ಅವರು, ಪರಧರ್ಮ ಸಹಿಷ್ಣತೆ ಇರಲಿ, ಆದರೆ ನಮ್ಮ ಧರ್ಮದ ಆಚರಣೆ ಇರಲಿ, ಯಾರು ಲಿಂಗಧಾರಣೆ ಮಾಡಿಕೊಂಡಿಲ್ಲವೋ, ಅವರಿಗೆ ಸೇವಾದೀಕ್ಷೆ ಮಾಡುವುದರಲ್ಲಿ ಅರ್ಥವಿಲ್ಲ.ನಮ್ಮಲ್ಲಿ ಒಗುಟ್ಟು ಕೇವಲ ರಾಜಕೀಯ ಅಧಿಕಾರಕ್ಕಾಗಿ ಮಾತ್ರಆದರೆ ಸಾಲದು, ಎಲ್ಲಾ ರಂಗದಲ್ಲಿಯೂ ವೀರಶೈವ, ಲಿಂಗಾಯಿತರು ಮುಂದೆ ಬರುವಂತೆ ಆಗಬೇಕು. ಈ ನಿಟ್ಟಿನಲ್ಲಿ ಶಂಕರ್ ಬಿದರಿಯವರ ಕೈ ಬಲಪಡಿಸುವ ಕೆಲಸ ಮಾಡಬೇಕಾಗಿದೆ.ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾ ಪದಾಧಿಕಾರಿಗಳ ನೇಮಕಕ್ಕೆ ಚುನಾವಣೆ ನಡೆಸುವ ಬದಲು ಅವಿರೋಧ ಆಯ್ಕೆಗೆ ಎಲ್ಲರೂ ಮುಂದಾಗಬೇಕು. ಚುನಾವಣೆ ಎಂದರೆ ರಾಜಕಾರಣ, ವಿಘಟನೆ ಸಾಮಾನ್ಯ. ಹಾಗಾಗಿ ಎಲ್ಲರೂ ಒಗ್ಗೂಡುವಂತಹ ವಾತಾವರಣ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ,ಹನ್ನೆರಡೆನೇ ಶತಮಾನದ ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿರುವ ಯಾವುದಾದರೂ ಸಮುದಾಯಗಳಿದ್ದರೆ ಅದು ವೀರಶೈವ ಮತ್ತು ಲಿಂಗಾಯಿತ ಮಾತ್ರ. ನಮ್ಮಲ್ಲಿಯೇ ಸಣ್ಣ ಸಣ್ಣ ಸಂಘಟನೆಗಳು ಹುಟ್ಟಿಕೊಂಡು ಶಕ್ತಿ ಕುಂದಿದೆ.ಹಾಗಾಗಿ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದ ಹೆಸರಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು.ರಾಜಕೀಯ ಕ್ಷೇತ್ರವನ್ನು ಹೊರತು ಪಡಿಸಿ, ಉಳಿದ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಒಗ್ಗಟ್ಟು ಅನಿವಾರ್ಯ ಎಂದರು.
ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದಜಿಲ್ಲಾಧ್ಯಕ್ಷಡಾ.ಪರಮೇಶ್ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ವೀರಶೈವ,ಲಿಂಗಾಯಿತರು ಸುಮಾರು ೭-೮ಲಕ್ಷ ಜನಸಂಖ್ಯೆಇದೆ. ಆದರೆ ಮಹಾಸಭಾದಲ್ಲಿ ಸದಸ್ಯರಾಗಿರುವುದು ಕೇವಲ ೨ ಸಾವಿರ ಜನ ಮಾತ್ರ. ಮಹಾಸಭಾದ ತೀರ್ಮಾನದಂತೆ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಪ್ರತಿ ಮನೆಯಲ್ಲಿಯೂ ಓರ್ವ ಸದಸ್ಯನನ್ನು ನೊಂದಾಯಿಸುವುದು ನಮ್ಮ ಮುಂದಿರುವ ದೊಡ್ಡ ಸವಾಲು. ಈ ಕೆಲಸವನ್ನು ನಾನು ಮತ್ತು ನನ್ನ ತಂಡ ಶಿರಾಸ ವಹಿಸಿ ಪಾಲಿಸುತ್ತೇವೆ.ಸಮುದಾಯದ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಒಗ್ಗಟ್ಟು ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಿರೇಮಠದಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ, ಡಾ.ಶಿವರುದ್ರಶಿವಾಚಾರ್ಯ ಸ್ವಾಮೀಜಿ, ಬೆಟ್ಟದಳ್ಳಿ ಶ್ರೀಚಂದ್ರಶೇಖರ ಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ ವಹಿಸಿದ್ದರು. ಶಂಕರ್ ಬಿದರಿ,ಬಿ.ಎಸ್.ಸಚ್ಚಿದಾನಂದಮೂರ್ತಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಸದಸ್ಯರಾದಎಸ್.ಕೆ.ರಾಜಶೇಖರ್,ತರಕಾರಿ ಮಹೇಶ್, ಮಹಿಳಾ ಶ್ರೀಮತಿ ಮುಕ್ತಾಂಭ, ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜಕ್ಕಾಗಿ ದುಡಿದ ಹಿರಿಯರನ್ನು ಸನ್ಮಾನಿಸಲಾಯಿತು.
– ಕೆ.ಬಿ.ಚಂದ್ರಚೂಡ