ಚಿಕ್ಕಮಗಳೂರು:– ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮಾರಗಿರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಸ್ರಾರು ಭಕ್ತಾಧಿಗಳು ಹಾಗೂ ವಧು-ವರರ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ವೈಭವದಿಂದ ಜರುಗಿತು.
ಪಂಗುನಿ ಉತ್ತಿರ ಜಾತ್ರೆ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಭಿಷೇಕ, ವಿಶೇಷಪೂಜೆ, ಅಲಂಕಾರ ಮಾಡಲಾಯಿತು. ಕಾಲ್ನಡಿಗೆ ಹಾಗೂ ಟ್ರಾಕ್ಟರ್‌ಗಳ ಮೂಲಕ ಆಗಮಿಸಿದ ಸುತ್ತಮುತ್ತಲ ಗ್ರಾಮಗಳ ನೂರಾ ರು ಭಕ್ತರು ಸಾಮೂಹಿಕವಾಗಿ ಕಾವಡಿ ಸಮರ್ಪಿಸಿದರು. ಶ್ರೀ ಸುಬ್ರಹ್ಮಣ್ಯ ಸ್ವಾಮಿ, ವಳ್ಳಿ, ದೇವಯಾನೆರವರ ಕಲ್ಯಾಣೋತ್ಸವ ನೆರವೇರಿತು.
ಇದೇ ಸಂದರ್ಭ ದೇವಾಲಯ ಸಮಿತಿ ಹಮ್ಮಿಕೊಂಡಿದ್ಧ ಸರಳ ಸಾಮೂಹಿಕ ವಿವಾಹದಲ್ಲಿ ಸುಮಾ ರು ೧೩ ನವಜೋಡಿಗಳಿಗೆ ವಸ್ತç, ಮಾಂಗಲ್ಯ, ಕಾಲುಂಗುರ ಹಾಗೂ ಸಂಸಾರಕ್ಕೆ ಅಗತ್ಯವಾದ ಪರಿಕರಗಳನ್ನು ಉಡುಗೊರೆಯಾಗಿ ನೀಡಿದರು. ಕುಟುಂಬಸ್ಥರ ಸಮ್ಮುಖದಲ್ಲಿ ನವಜೋಡಿಗಳು ಮಾಂಗಲ್ಯ ಧಾರಣೆ ನಡೆ ಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಅರ್ಚಕ ಶೇಷಾದ್ರಿ ಭಟ್ ನೇತೃತ್ವದ ತಂಡ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಶ್ರೀ ಸುಬ್ರ ಹ್ಮಣ್ಯ ಸ್ವಾಮಿಯ ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನದಾಸೋಹ ನಡೆಯಿತು.
ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ ಆಡಂಬರದ ಮದುವೆ ಗಳು ನವ ಜೋಡಿಗಳಿಗೆ ಕೆಲ ಸಮಯ ಸಂತಸ ನೀಡುತ್ತದೆ, ಬಳಿಕ ಸಂಕಷ್ಟದ ಹಾದಿಯನ್ನು ನೆನಪಿಸುತ್ತದೆ. ಮತ್ತೊಬ್ಬರನ್ನು ಅನುಕರಿಸಿ ಬಾಳುವುದಕ್ಕಿಂತ, ನಮ್ಮ ಶಕ್ತಿಗನುಸಾರ ಬದುಕಿದರೆ ನೆಮ್ಮದಿ ಹಾಗೂ ಶಾಂತಿ ಜೀ ವನ ನಮ್ಮದಾಗಲಿದೆ ಎಂದು ತಿಳಿಸಿದರು.
ಆ ನಿಟ್ಟಿನಲ್ಲಿ ಕುಮಾರಗಿರಿ ದೇವಾಲಯ ಸಮಿತಿ ಬಡಕುಟುಂಬಕ್ಕೆ ಅನುಕೂಲವಾಗಲು ಸಕಲ ಸೌಲಭ್ಯ ಗಳು ನೀಡಿ ಸಾಮೂಹಿಕ ಮದುವೆಗಳನ್ನು ಹಮ್ಮಿಕೊಂಡು ಜನತೆಯ ಆಧಾರವಾಗಿದೆ. ನವ ಜೋಡಿಗಳು ಕೂಡಾ ಭಗವಂತನ ಸನ್ನಿದಾನದಲ್ಲಿ ಮಾಂಗಲ್ಯ ಧರಿಸಿದರೆ, ಸಕುಟುಂಬವು ಪ್ರೀತಿ, ವಿಶ್ವಾಸದಿಂದ ಬಾಳು ತ್ತಾರೆ ಎಂದರು.

ಸಿಪಿಐ ರಾಜ್ಯ ಮಂಡಳಿ ಸದಸ್ಯ ಹೆಚ್.ಎಂ.ರೇಣುಕಾರಾಧ್ಯ ಮಾತನಾಡಿ ಲಕ್ಷಾಂತರ ರೂ.ಗಳನ್ನು ಸಾಲಮಾಡಿ ಮದುವೆ ಮಾಡಿಕೊಂಡು ಸುಳಿಯಲ್ಲಿ ಸಿಲುಕು ಬದಲು, ಈ ರೀತಿಯ ಸಾಮೂಹಿಕ ಕಲ್ಯಾಣ ದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಸಿದರೆ ಸಂತೋಷದಿAದ ಕೂಡಿರುತ್ತದೆ ಎಂದು ಹೇಳಿದರು.
ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್‌ಕುಮಾರ್ ಮಾತನಾಡಿ ಈ ಭಾಗದ ಸುತ್ತಮುತ್ತಲು ಹಲವಾರು ನಿವೇಶನ, ವಸತಿ ರಹಿತರಿದ್ದು ಮೂಲಹಕ್ಕು ಪತ್ರ ದೊರೆತಿಲ್ಲ. ಹೀಗಾಗಿ ಗಾಯತ್ರಿ ಶಾಂತೇಗೌಡರು ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಹಕ್ಕುಪತ್ರ ವಿತರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಮಿಳು ಸಂಘದ ಜಿಲ್ಲಾಧ್ಯಕ್ಷ ಜಿ.ರಘು, ಕಾರ್ಯದರ್ಶಿ ಎಸ್.ಅಣ್ಣವೇಲು, ದೇವಾ ಲಯ ಸಮಿತಿ ಅಧ್ಯಕ್ಷ ವಿ.ಗುಣಶೇಖರ್, ಗೌರವಾಧ್ಯಕ್ಷ ಶಂಕರ್, ಉಪಾಧ್ಯಕ್ಷರಾದ ಎ.ಮಹಾಲಿಂಗA, ಜಿ. ರಮೇಶ್, ಸಹ ಕಾರ್ಯದರ್ಶಿ ಅರಿವಳಗನ್, ಖಜಾಂಚಿ ಕೆ.ಕೃಷ್ಣರಾಜ್, ನಿರ್ದೇಶಕರುಗಳಾದ ಜಿ.ಶಂಕರ್, ಗೋಪಾಲ್, ಸಿ.ವೆಂಕಟೇಶ್, ಮುರುಗನ್, ಪುವೆಂದಿರನ್, ಶಶಿಧರ್, ಮಣಿವೇಲು, ಚಿನ್ನಪ್ಪ, ಶಕ್ತಿವೇಲ್ ಮತ್ತಿತರರು ಉಪಸ್ಥಿತರಿದ್ದರು.
- ಸುರೇಶ್ ಎನ್.