ತುಮಕೂರು: ಸರ್ಕಾರವು 2 ವರ್ಷಗಳ ಅವಧಿಯನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ರಾಜ್ಯದ ಜನಹಿತಕ್ಕಾಗಿ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಹೊತ್ತಿಗೆಯನ್ನು ಹೊರ ತಂದಿದ್ದು, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಕಿರುಹೊತ್ತಿಗೆಯನ್ನು ಇಂದು ಬಿಡುಗಡೆ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾಃ ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಮತ್ತು ಅವರ 134ನೇ ಜಯಂತಿ ಹಾಗೂ ಡಾ: ಬಾಬು ಜಗಜೀವನ ರಾಂ ಅವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಸಚಿವರು ಈ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ, ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್, ಸಮಾಜ ಕಲ್ಯಾಣ ಸಚಿವ ಡಾಃ ಹೆಚ್.ಸಿ. ಮಹದೇವಪ್ಪ, ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕುಣಿಗಲ್ ಶಾಸಕ ಡಾ|| ಹೆಚ್.ಡಿ. ರಂಗನಾಥ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.