ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಲಕ್ಷ್ಮೀಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಲ್.ಎನ್.ಪ್ರಕಾಶ್ ಅವರು ಬಂಡಿಹೊಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಪಡೆಯುವ ದಿನಾಂಕದಂದು ಸಮಯದ ಅಭಾವದ ಹಿನ್ನೆಲೆಯಲ್ಲಿ ವಾಪಸ್ ಪಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಕಾಂಗ್ರೆಸ್ ಮುಖಂಡ ಅಕ್ಕಿ ಮಂಜು ಅವರ ಮಾರ್ಗದರ್ಶನದಲ್ಲಿ ಕಣದಿಂದ ನಿವೃತ್ತಿಯಾಗುತ್ತಿದ್ದೇನೆ. ಕಣದಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಎಲ್.ಎನ್.ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಲಕ್ಷ್ಮೀಪುರ ಅಕ್ಕಿ ಮಂಜು, ಸೊಸೈಟಿ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್.ಪಿ.ಪ್ರಶಾಂತ್, ಲಕ್ಷ್ಮೀಪುರ ಮಹೇಶ್ ಇತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.