ಕೆ.ಆರ್.ಪೇಟೆ: ತಾಲ್ಲೂಕಿನ ಬಂಡಿಹೊಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 06ಸ್ಥಾನಗಳಲ್ಲಿ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು 06 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಹರೀಶ್, ಬಿ.ಮಂಜುನಾಥ್, ಬಿ.ಆರ್.ಜಗದೀಶ್, ಬಿ.ಗಣೇಶ್, ಸೋಮನಾಯಕ್, ಮಂಜಮ್ಮ ಮಂಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳಾದ ದರ್ಶನ್, ಶ್ರೀಧರ್.ಬಿ, ಶಿವೇಗೌಡ, ಭಾಗ್ಯಮ್ಮ ಮಂಜೇಗೌಡ, ಶಂಕರಯ್ಯ, ಬೋರೇಗೌಡ ಅವರು ಜಯ ಸಾಧಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಹೆಚ್.ಬಿ.ಭರತ್ ಕುಮಾರ್, ಸಹ ಚುನಾವಣಾಧಿಕಾರಿಯಾಗಿ ಮಹಾದೇವ್ ಕಾರ್ಯನಿರ್ವಹಣೆ ಮಾಡಿದರು.

ಬೆಂಬಲಿಗರ ಅಭಿನಂದನೆ:-
ಕಾಂಗ್ರೆಸ್ ಬೆಂಬಲಿತ ನೂತನ ನಿರ್ದೇಶಕರನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಸಮಾಜ ಸೇವಕ ವಿಜಯ್ ರಾಮೇಗೌಡ, ಮನ್‌ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ.ಹರೀಶ್, ಜಿ.ಪಂ.ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ನಾಗೇಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ಕುಪ್ಪಹಳ್ಳಿ ಶೇಷಾದ್ರಿ ಮತ್ತಿತರರು ಅಭಿನಂದಿಸಿದರು.

ಜೆಡಿಎಸ್- ಬಿಜೆಪಿ ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳನ್ನು ಶಾಸಕ ಎಚ್.ಟಿ.ಮಂಜು, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಹೆಚ್.ಟಿ.ಲೋಕೇಶ್, ಸೊಸೈಟಿ ಮಾಜಿ ಅಧ್ಯಕ್ಷ ಮಹಾದೇವೇಗೌಡ, ಸೇರಿದಂತೆ ಹಲವು ಮುಖಂಡರು ಅಭಿನಂದಿಸಿದರು.
– ಶ್ರೀನಿವಾಸ್ ಆರ್.