ಕೆ.ಆರ್.ಪೇಟೆ: ಪಟ್ಟಣದ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಗೋವಾದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಗತಿ ಶಾಲೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಆಹಾರ ತಜ್ಞೆ ಡಾ.ಎಂ.ಕೆ.ಮೋನಿಕಾ ತಿಳಿಸಿದ್ದಾರೆ.
ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿದ ನಂತರ ಮಾಹಿತಿ ನೀಡಿದ ಅವರು, ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಫೌಂಡೇಶನ್ ಇಂಡಿಯಾ ದವರು ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಗೋವಾದ ಕಲಂಗುಟ್ಟೆ ಯಲ್ಲಿ ಏರ್ಪಡಿಸಿದ್ದಾರೆ. ಸ್ಪರ್ಧೆಯು ಈ ತಿಂಗಳ 25ರಿಂದ 27ರವರೆಗೆ ನಡೆಯಲಿದೆ. ಪ್ರಗತಿ ಶಾಲೆಯ ವಿದ್ಯಾರ್ಥಿಗಳಾದ ಕೆ ಎಂ ಅಶ್ವಿನ್, ಜಿಎ ಧನ್ಯ, ಹಾಗೂ ತೇಜಸ್ ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರರಾದ ಸಿ ಹೇಮಂತ್, ಅಂಜಲಿ, ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ, ಪ್ರಗತಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ಎಂ.ಕೆ ಮೋನಿಕಾ ಭಾಗವಹಿಸಿದ್ದರು.
- ಶ್ರೀನಿವಾಸ್ ಆರ್.