ಮಂತ್ರಾಲಯ: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಹತ್ಯೆಗೀಡಾಗಿ ಮೃತರಾದ ಕರ್ನಾಟಕದ 3 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದರ ಜೊತೆಗೆ ಮತ್ತು ಮೃತರ ಕುಟುಂಬದ ಶೈಕ್ಷಣಿಕ ಜವಾಬ್ದಾರಿಯನ್ನು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠ ವಹಿಸಿಕೊಳ್ಳಲಿದೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಗುರುಗಳಾದ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರು ತಿಳಿಸಿದರು.

ಉಗ್ರರ ದಾಳಿಗೆ ತುತ್ತಾದ ಎಲ್ಲರೂ ನಮ್ಮವರೇ,ನಮ್ಮ ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡ ದುಃಖ ನಮಗಿದೆ,ಮೃತರ,ಗಾಯಾಳುಗಳ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ದೇಶದಲ್ಲಿ ಅಶಾಂತಿಯ ವಾತಾವರಣ ಮೂಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಇದಕ್ಕೆ ದೇಶದ ಜನರೆಲ್ಲರೂ ಒಗ್ಗಟ್ಟಾಗಿ ಉತ್ತರ ನೀಡಬೇಕಾದ ವಾತಾವರಣ ಕಲ್ಪಿಸಬೇಕಾಗಿದೆ. ಈ ಮಹತ್ಕಾರ್ಯಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಸದಾ ಇರಲಿದೆ ಎಂದು ಪೂಜ್ಯರು ಹೇಳಿದರು.
- ಕೆ.ಬಿ.ಚಂದ್ರಚೂಡ