ಕೊಟ್ಟಿಗೆಹಾರ-ತರುವೆಯಲ್ಲಿ ವಿಜೃಂಭಣೆಯಿಂದ ನಡೆದ ಕಲಾವಳಿ ಉತ್ಸವ

ಕೊಟ್ಟಿಗೆಹಾರ: ತರುವೆಯ ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನದ ವಾರ್ಷಿಕ ಕಲಾವಳಿ ಉತ್ಸವ ಹಾಗೂ ವಾರ್ಷಿಕ ಮಹಾ ಪೂಜೆ ವಿಜೃಂಭಣೆಯಿಂದ ನಡೆಯಿತು.

101 ದೈವಗಳಿಗೆ ದೀಪಾರಾಧನೆ, ನೈವೇದ್ಯ, ಮಹಾ ಮಂಗಳಾರತಿ, ಕಲಾಹೋಮ, ಕಲಶ ಪೂಜೆ, ಪಟ್ಟಧಾರಣೆ ಪೂಜೆ, ಕುಂಕುಮಾರ್ಚನೆ, ಹೂವಿನ ಪೂಜೆ, ನೈವೇದ್ಯ ಪೂಜೆ, ದೀಪಾರಾಧನೆ ಪೂಜೆ ಶಾಸ್ರ್ರೋಕ್ತವಾಗಿ ನೆರವೇರಿತು.

ಉತ್ಸವದ ಅಂಗವಾಗಿ ಕೊಟ್ಟಿಗೆಹಾರ, ತರುವೆ, ಬಣಕಲ್, ಅತ್ತಿಗರೆ, ಭಿನ್ನಡಿ, ಆಲೇಕಾನ್ ಸೇರಿದಂತೇ ವಿವಿಧ ಗ್ರಾಮಗಳ ಸಾವಿರಾರು ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು ಹಣ್ಣುಕಾಯಿ ಅರ್ಪಿಸಿದರು.

ದೇವಸ್ಥಾನದ ಆವರಣವನ್ನು ತಳಿರು ತೋರಣ, ವಿದ್ಯುತ್ ಹಾಗೂ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾಧಿಗಳು ಇದ್ದರು.

Leave a Reply

Your email address will not be published. Required fields are marked *

× How can I help you?