ಕೊರಟಗೆರೆ :- ಸಂಸಾರಿಕ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ತಾಲೂಕಿನ ಅಕ್ಕಿ ರಾಂಪುರ ಗ್ರಾಮದ ಲೇಟ್ ನರಸಿಂಹಯ್ಯನ ಮಗ ಪ್ರಕಾಶ್ (45 ವರ್ಷ) ಸಾವಿಗಿಡಾದ ದುರ್ದೈವಿಯಾಗಿದ್ದು, ಈತ ಸಂಸಾರಿಕ ಜೀವನದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಅನಿಲ್ ಹಾಗೂ ಪಿಎಸ್ಐ ತೀರ್ಥೇಶ್ ಧಾವಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
-ಶ್ರೀನಿವಾಸ್ .