ಮಂಡ್ಯ.ಮೇ03:- ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢ ಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬAಧ ರಾಜ್ಯ ಮಟ್ಟದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ಜೇಷ್ಠತಾ ಪಟ್ಟಿಗೆ ಸಂಬAಧಿಸಿದAತೆ ಯಾರಲ್ಲಾದರು ಆಕ್ಷೇಪಣೆಗಳಿದ್ದಲ್ಲಿ ಸದರಿ ಎರಡೂ ಪಟ್ಟಿಗಳಿಗೆ ನಿಗದಿತ ನಮೂನೆಯಲ್ಲಿ ಆಕ್ಷೇಪಣೆಯನ್ನು ಪೂರಕ ದಾಖಲೆಗಳೊಂದಿಗೆ ಮೇ 08 ರೊಳಗೆ ಸಂಬAಧಿಸಿದ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.
([under Administration , Service matters , Teachers , Service matters 2025 ,Sl No 4 Dated 25.04.2025], Provision seniority list and inconstant data) ರಲ್ಲಿರುವ ಜೇಷ್ಠತಾ ಪಟ್ಟಿಯನ್ನು ಎಲ್ಲಾ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು ಪರಿಶೀಲಿಸಿಕೊಂಡು ಸರಿಯಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಮಂಡ್ಯ ಉತ್ತರ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.