ಕೊರಟಗೆರೆ:- ತುಮಕೂರು ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಊರಿಗೆ ಹಿಂತಿರುಗುತ್ತಿರುವಾಗ ಗೂಡ್ಸ್ ಬೊಲೆರೋ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದ ಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಕೊನೆ ಉಸಿರೆಳೆದ ಘಟನೆ ಕೊರಟಗೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದ ಎದುರು ಕಿಂಗ್ ಡಾಬಾ ಮುಂಬಾಗ ಈ ದುರ್ಘಟನೆ ಜರುಗಿದ್ದು, ಮಧುಗಿರಿ ತಾಲೂಕಿನ ಲಿಂಗೇನಹಳ್ಳಿ ಗ್ರಾಮದ ಮೆಹಬೂಬ್ ಪಾಷಾ (64 ವರ್ಷ) ಸಾವಿಗೀಡಾದ ದುರ್ದೈವಿಯಾಗಿದ್ದಾನೆ.

ಮೃತ ಮಹಬೂಬ್ ಪಾಷಾ ತುಮಕೂರು ಕಡೆಯಿಂದ ಲಿಂಗೇನಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಎದುರುಮುಖವಾಗಿ ಬಂದ ಗೂಡ್ಸ್ ಬೊಲೆರೋ ಹಾಗೂ ದ್ವಿಚಕ್ರ ವಾಹನದ ನಡುವೆ ನೇರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೆಹಬೂಬ್ ಪಷಾ ಗೆ ಸ್ಥಳದಲ್ಲಿಯೇ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆ ಉಸಿರೆಳೆದಿದ್ದಾನೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಅನಿಲ್ ಹಾಗೂ ಪಿಎಸ್ಐ ತೀರ್ಥೇಶ್ ಸ್ಥಳ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
- ನರಸಿಂಹಯ್ಯ ಕೋಳಾಲ