ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ರಾಜ್ಯ ಕ್ರೈಸ್ತರ ಅಭಿವೃದ್ದಿ ನಿಗಮದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಣಕಲ್ ನ ಹರ್ಷ ಮೆಲ್ವಿನ್ ಲಸ್ರಾದೊ ಅವರನ್ನು ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಜಿ.ಸುರೇಂದ್ರಗೌಡ ಅವರು ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು ಸಮುದಾಯದ ಅಬಿವೃದ್ದಿಗಾಗಿ ಮೆಲ್ವಿನ್ ಆಯ್ಕೆಯಾಗಿರುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ. ಇನ್ನಷ್ಟು ಪಕ್ಷವನ್ನು ಬಲಪಡಿಸುವ ಜೊತೆಗೆ ಸಮುದಾಯದ ಏಳಿಗೆಗಾಗಿ ಶ್ರಮಿಸಲಿ.ನಮ್ಮ ಪ್ರೋತ್ಸಾಹ ಅವರಿಗೆ ಸದಾ ಇರುತ್ತದೆ’ಎಂದರು.
ಸನ್ಮಾನ ಸಮಾರಂಭದಲ್ಲಿ ಗ್ಯಾರಂಟಿ ಸಮಿತಿಯ ಮುಖಂಡರಾದ ಬಿ.ಎಸ್.ಜಯರಾಮ್ ಹಾಗೂ ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿ ಇಒ ದಯಾವತಿ ಇದ್ದರು.