ಕೊಟ್ಟಿಗೆಹಾರ-ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ- ಚಾಲಕನಿಗೆ ಗಂಭೀರ ಗಾಯ

ಕೊಟ್ಟಿಗೆಹಾರ – ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *