ಬೇಲೂರು:-ಭವ್ಯ ಭಾರತವನ್ನು ರೂಪಿಸುವ ವಿದ್ಯಾರ್ಥಿಗಳಿಗೆ ವೈಜ್ಞಾನಿಕತೆ ಮತ್ತು ವೈಚಾರಿಕತೆ ಭೋದಿಸುವ ಬದಲು ಶಾಲಾ ಕಾಲೇಜುಗಳ ಪಠ್ಯಗಳ ಜಾತಿ,ಧರ್ಮಾಂತೆ ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತದೆ.ಈ ಬೆಳೆವಣಿಗೆ ಸಮಾಜಕ್ಕೆ ಮಾರಕವೆಂದು ಪುಷ್ಪಗಿರಿ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.
ತಾಲ್ಲೂಕಿನ ಹೆಬ್ಬಾಳು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಅವರಣದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ವತಿಯಿಂದ ನಡೆದ ವಚನ ಗೀತಾ ಗಾಯನ ಮತ್ತು ವಚನ ವಿಶ್ಲೇಷಣೆ ಕಾರ್ಯಕ್ರಮದಲ್ಲಿ ಆರ್ಶಿವಚನ ನೀಡಿ ಮಾತನಾಡಿದರು.
ಇತ್ತೀಚಿನ ದಿನದಂದು ದೇಶದಲ್ಲಿ ಕೋಮುಗಲಭೆ ಮತ್ತು ಸಾಮರಸ್ಯ ಹಾಳಾಗಿ ಜನರಲ್ಲಿ ವೈಮನಸ್ಯ ಬೆಳೆದಿದೆ.ಇದಕ್ಕೆ ಕಾರಣ ಸಣ್ಣ ವಯಸ್ಸಿನಲ್ಲಿಯೇ ಮಕ್ಕಳಿಗೆ ಸರಿಯಾದ ಸಂಸ್ಕಾರ ಮತ್ತು ಶಿಕ್ಷಣ ನೀದಷ್ಟೇ ಇರುವುದಾಗಿದೆ.ಗುರು ಹಿರಿಯರ ಬಗ್ಗೆ ಗೌರವ ಮತ್ತು ಸಮಾಜದೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಜ್ಞಾನವನ್ನು ನೀಡುವ ಕೆಲಸವನ್ನು ಶಿಕ್ಷಣ ಇಲಾಖೆ ಮಾಡಬೇಕಿದೆ.ದೇಶದಲ್ಲಿ ಸಾಮರಸ್ಯ ಮೂಡಿಸಲು 12ನೆ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯ ಪೂರಕವಾಗಿದೆ.ಇಂತಹ ವಚನ ಸಾಹಿತ್ಯವನ್ನು ಸುತ್ತೂರು ಮಠದ ಜಗದ್ಗುರುಗಳು ಸ್ಥಾಪಿಸಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸುತ್ತಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ ಎಂದರು.
ವಿಶೇಷವಾಗಿ ಪತ್ರಕರ್ತರಾದ ಹೆಬ್ಬಾಳು ಹಾಲಪ್ಪನವರು ಶರಣ ಸಾಹಿತ್ಯ ಬಗ್ಗೆ ಅತ್ಯಂತ ಅಭಿಮಾನ ಇರುವವರು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಅಪರೂಪ ಕೆಲಸ ಮಾಡುತ್ತಿದ್ದಾರೆ ಎಂದು ಅಭಿಮಾನದ ಮಾತುಗಳನ್ನು ಆಡಿದರು.
ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ,ಕನ್ನಡ ಸಾಹಿತ್ಯದಲ್ಲಿ ಜೈನ,ಶರಣ ಮತ್ತು ದಾಸ ಸಾಹಿತ್ಯ ಮತ್ತು ನವ್ಯ ಸಾಹಿತ್ಯದಲ್ಲಿ ಶರಣ ಸಾಹಿತ್ಯ ವಿಶ್ವ ವ್ಯಾಪಕವಾಗಿ ಬೆಳೆದಿದೆ.ವಚನ ಎಂದರೆ ಬದುಕು. ಪಠ್ಯದಲ್ಲಿ ವಿದ್ಯಾರ್ಥಿಗಳಿಗೆ ವಚನ ಸಾಹಿತ್ಯವಿದೆ.ವಚನವ ಗೀತಾ ಗಾಯನ ಮತ್ತು ವಚನ ವಿಶ್ಲೇಷಣೆ ಕಾರ್ಯವನ್ನು ಹೆಬ್ಬಾಳು ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾದ ಶೋಭ, ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಂದನ ಕುಮಾರ್, ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷ ವೈ.ಎಸ್.ಸಿದ್ದೇಗೌಡ, ಬೇಲೂರು ಲಯನ್ಸ್ ಭವನ ಟ್ರಸ್ಟ್ ಅಧ್ಯಕ್ಷ ದೊಡ್ಡಮನೆ ಪ್ರಭಾಕರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಆರ್ ಎಸ.ಮಹೇಶ್,ಎಸ್ ಡಿಎಂಸಿ ಅಧ್ಯಕ್ಷ ಸುಂದ್ರೇಶ್, ಉಪಾಧ್ಯಕ್ಷೆ ಗೀತಾ ಶಿವರಾಜ್, ಹೋಬಳಿ ಘಟಕದ ಅಧ್ಯಕ್ಷೆ ವಿನುತ ಧನಂಜಯ, ಶಿಕ್ಷಕರಾದ ನಾಗರಾಜ್ ಮತ್ತು ಸಂಘಟನಾ ಕಾರ್ಯದರ್ಶಿ ಧನಂಜಯ, ಗೌರಮ್ಮ.ಶೈಲಾ, ಗುರುಪಾದಸ್ವಾಮಿ, ಕೃಷ್ಣಣ್ಣ, ವೈ.ಬಿ.ಸುರೇಶ್, ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು.
ಸುತ್ತೂರು ಮಠದ ಹಿಂದಿನ ಜಗದ್ಗುರು ಡಾ.ಶಿವರಾತ್ರಿ ದೇಶಿದೇಂದ್ರ ಮಹಾಸ್ವಾಮಿಗಳು ತಮ್ಮ ಜನ್ಮ ದಿನದ ಅಂಗವಾಗಿ ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡುವ ಮೂಲಕ 12ನೆ ಶತಮಾನದ ವಚನ ಸಾಹಿತ್ಯ ಪ್ರಚಾರಕ್ಕೆ ಮುನ್ನುಡಿ ಬರೆದ ಹಿನ್ನೆಲೆಯಲ್ಲಿ ಪರಿಷತ್ತು ವಚನ ಸಾಹಿತ್ಯ ಮಾನವೀಯ ಮೌಲ್ಯಗಳನ್ನು ತಿಳಿಸಲು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ.ಮುಂದಿನ ದಿನದಂದು ವಚನ ಸಾಹಿತ್ಯದ ಬಗ್ಗೆ ವೈಶಿಷ್ಟ್ಯಪೂರ್ಣ ಕೆಲಸ ಮಾಡಲಾಗುತ್ತದೆ ಎಂದು ಬೇಲೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಹೇಳಿದರು.
–——————ರವಿಕುಮಾರ್