ತುಮಕೂರು:ಜಿಲ್ಲಾ ವೀರಶೈವ ಲಿಂಗಾಯತ ಸೇವಾ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ತುಮಕೂರು:ಜಿಲ್ಲಾ ವೀರಶೈವ ಲಿಂಗಾಯತ ಸೇವಾ ಸಮಿತಿ ವತಿಯಿಂದ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ನಗರದ ಎಸ್ಐಟಿಯ ಬಿರ್ಲಾ ಸಭಾಂಗಣದಲ್ಲಿ ಸೆ. 22 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ,ಬೆಳ್ಳಾವಿ ಕಾರದೇಶ್ವರ ಮಠಾಧ್ಯಕ್ಷರಾದ ಶ್ರೀ ಕಾರದ ವೀರಬಸವ ಸ್ವಾಮೀಜಿ ವಹಿಸಲಿದ್ದು,ಸಮಾರಂಭದ ಉದ್ಘಾಟನೆಯನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಜಿ.ಬಿ. ಜ್ಯೋತಿಗಣೇಶ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹಾಗೂ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ. ಪರಮೇಶ್ ವಹಿಸುವರು.ಮುಖ್ಯ ಅತಿಥಿಗಳಾಗಿ ಕಮರ್ಷಿಯಲ್ ಟ್ಯಾಕ್ಸ್ ಉಪಆಯುಕ್ತರಾದ ಶೈಲಾ ಸಂಪತ್, ಸಿಐಟಿ ಉಪಪ್ರಾಂಶುಪಾಲರಾದ ಡಾ. ಶಾಂತಲ ಸಿ.ಪಿ., ಅಖಿಲ ಭಾ.ವೀ.ಮ. ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಹೆಗ್ಗಡೆ ಪಾಲ್ಗೊಳ್ಳುವರು.ವಿಶೇಷ ಆಹ್ವಾನಿತರಾಗಿ ವೀರಶೇವ ಸಮಾಜದ ಅಧ್ಯಕ್ಷರಾದ ಟಿ.ಬಿ. ಶೇಖರ್, ಉಪಾಧ್ಯಕ್ಷರಾದ ಎಸ್.ಜಿ. ಚಂದ್ರಮೌಳಿ, ಮುಖಂಡರಾದ ರವಿಶಂಕರ್ ಹೆಬ್ಬಾಕ, ಎಸ್.ಡಿ. ದಿಲೀಪ್‌ಕುಮಾರ್, ನಟರಾಜ್ ಸಾಗರನಹಳ್ಳಿ, ಹೆಚ್.ಎನ್. ದೀಪಕ್, ಬಿ. ಪಾಲನೇತ್ರಯ್ಯ, ಜಗದೀಶ್, ಪ್ರದೀಪ್‌ಕುಮಾರ್, ಯಶಸ್ ದೇವಿಪ್ರಸಾದ್, ನಿತಿನ್ ಎಸ್. ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

× How can I help you?