ಮೈಸೂರು-ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದೆ ಬರುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕು ಎಂದು ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಅಧಿಕಾರಿ ಡಾಕ್ಟರ್ ಸುಬ್ರಮಣ್ಯ ಸಿ.ಇ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಕಾಲೇಜಿನಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತ ಹೀನತೆ,ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳನ್ನು ನಿಭಾಯಿಸಲು ರಕ್ತ ಸಂಗ್ರಹದ ಅಗತ್ಯವಿರುತ್ತದೆ.ಹೀಗಾಗಿ ಪರೋಪಕಾರದ ಉದ್ದೇಶವುಳ್ಳ ಇಂತಹ ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು’ ಎಂದು ತಿಳಿಸಿದರು.
ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ರಕ್ತದಾನ ಮಾಡಿ ಮಾದರಿಯಾದರು.
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪ್ರಾಂಶುಪಾಲರಾದ ಪದ್ಮಾವತಿ ಕೆ ಎಂ,ರೆಡ್ ಕ್ರಾಸ್ ಸೊಸೈಟಿ ಸಂಯೋಜಕರಾದ ಸೋನಾಕ್ಷಿ.ಸಿ ಸುರೇಶ್, ಹಾಗೂ ಕಾಲೇಜಿನ ಶಿಕ್ಷಕ ವೃದ್ಧ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
———————--ಮಧುಕುಮಾರ್