ನಾಗಮಂಗಲ-ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಬೆಳ್ಳೂರು ಹೋಬಳಿ ಶ್ರೀ ಬಾಲಗಂಗಾಧರನಾಥಸ್ವಾಮಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜಿನ ಆವರಣದಲ್ಲಿ ನಡೆಯಿತು.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮು ಅವರು ಜ್ಯೋತಿ ಬೆಳಗಿಸುವ ಮಾಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಸಂಘದ ಅಧ್ಯಕ್ಷ ಡಾ. ಎಂ.ಜಿ.ಶಿವರಾಮು ಮಾತನಾಡುತ್ತಾ, ಸಂಘದ ವತಿಯಿಂದ ಸದಸ್ಯತ್ವ ಪಡೆದಿರುವವರಿಗೆ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಅನುಕೂಲ ಮಾಡಬೇಕೆಂಬ ದೃಷ್ಟಿಯಿಂದ ಸಾಲವನ್ನು ನೀಡಲಾಗುತ್ತಿದೆ.
ಒಂದು ಸಹಕಾರ ಸಂಘ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸದಸ್ಯರ ಸಹಕಾರ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹುತಾತ್ಮರಾದ ಸೈನಿಕರಿಗೆ,ರೈತರಿಗೆ ಹಾಗೂ ಸಂಘದಲ್ಲಿ ಕಾರ್ಯ ನಿರ್ವಹಿಸಿ ಮೃತಪಟ್ಟಿದ್ದವರಿಗೆ ಶ್ರದ್ಧಾಂಜಲಿ ನಮನ ಸಲ್ಲಿಸಲಾಯಿತು.
ಈ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ಬಿ.ಕೆ.ಉಮೇಶ್,ನಿರ್ದೇಶಕರುಗಳಾದ ಸಿ.ಎನ್. ಚಂದನ್ ರಾಜ್, ಬಿ.ಜೆ.ಪ್ರದೀಪ್, ವೈ.ಪಿ.ಶಿವಕುಮಾರ್, ಹೆಚ್.ಜಿ.ಕುಮಾರಸ್ವಾಮಿ, ಯು.ಎ. ಮಮತಾ, ಹೆಚ್. ಅನಿತಾ, ಬಿ.ಎಲ್. ಪ್ರಮೀಳಮ್ಮ, ಡಿ.ಎಸ್. ಭಾರ್ಗವಿ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಡಿ.ನಾರಾಯಣಗೌಡ ಸೇರಿದಂತೆ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು
—————————–ಬಿ.ಹೆಚ್.ರವಿ ನಾಗಮಂಗಲ