ಚಿಕ್ಕಮಗಳೂರು-ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಶಾರೀರಿಕ ಹಾಗೂ ಮಾನಸಿಕವಾಗಿ ಸಮತೋಲನ ಕಾಪಾಡಲು ಸಹಕಾರಿ.ಹೀಗಾಗಿ ಪಠ್ಯದೊಂದಿಗೆ ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿಮುಖ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ.ಶಾಲಾ ಶಿಕ್ಷಣ ಇಲಾಖೆ,ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಪ್ರೌಡಶಾಲಾ ಸಹ ಶಿಕ್ಷಕರ ಸಂಘ,ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ನಿರಂತರ ಭಾಗವಹಿಸುವುದರಿಂದ ಕ್ರೀಡಾಸಕ್ತಿ ಮೂಡಲಿದೆ.ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಕ್ರೀಡಾಮನೋಭಾವನೆ ರೂಢಿಸಿಕೊಳ್ಳಬೇಕು.ಗೆಲುವಿಗೆ ಮಾತ್ರ ಸೀಮಿತರಾಗದೇ ಸ್ಪರ್ಧಿಸುವ ಗುಣ ಬೆಳೆಸಿಕೊಳ್ಳಬೇಕು.ಇಂದು ಸೋತವರು ಮುಂದೊoದು ದಿನ ಗೆಲುವಿನ ನಗೆ ಬೀರುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ದಸರಾ ಕ್ರೀಡಾಕೂಟಕ್ಕೆ ಪುರಾತನ ಇತಿಹಾಸವಿದೆ.ಹಿಂದಿನ ಕಾಲದಲ್ಲಿ ನಾಡಹಬ್ಬದಂದು ಕುಸ್ತಿ ಪಂದ್ಯಗಳು ನಡೆಯುತ್ತಿದ್ದವು.ಇದೀಗ ಕ್ರೀಡಾಕೂಟ ಆಯೋಜಿಸಿ ದಸರಾ ವೈಭವವನ್ನು ಉಳಿಸಲಾಗುತ್ತಿದೆ ಎಂದರು.
ಇoದು ವಲಯಮಟ್ಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಶ್ರಮವಿಟ್ಟು ಕ್ರೀಡೆಯಲ್ಲಿ ಆಟವಾಡಿದರೆ ತಾಲ್ಲೂಕು,ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಬಹುದು.ಇದಕ್ಕೆ ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಅಗತ್ಯ.ಈ ಮೂಲಕ ಜಿಲ್ಲೆಯ ಹೆಸರಿನ ಕೀರ್ತಿ ಪತಾಕೆ ಎಲ್ಲೆಡೆ ರಾರಾಜಿಸುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್, ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ ರಾಜ್ ಅರಸ್, ತಾಲ್ಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಗಂಗಾಧರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ. ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-೧ ಅಧ್ಯಕ್ಷ ಶಂಕರೇಗೌಡ, ತಾಲ್ಲೂಕು ಅಧ್ಯಕ್ಷ ಪ್ರವೀಣ್ ಮತ್ತಿ ತರರು ಉಪಸ್ಥಿತರಿದ್ದರು.
———————-—ಸುರೇಶ್