ನಾಗಮಂಗಲ:ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಸದಸ್ಯರುಗಳು ಠೇವಣಿಗಳನ್ನು ಮಾಡುವ ಮೂಲಕ ಹೆಚ್ಚಿನ ಆದಾಯವನ್ನು ಪಡೆಯಬಹುದು.ಅಗತ್ಯವಿದ್ದವರು ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ತಮ್ಮ ಕಷ್ಟಗಳನ್ನು ನೀಗಿಸಿಕೊಳ್ಳಬಹುದು ಎಂದು ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಪ್ರಕಾಶ್ ತಿಳಿಸಿದರು.
ಅವರು,ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘವು ನಿಮ್ಮ ಎಲ್ಲರ ಸಹಕಾರದಿಂದ ಒಂದು ಕೋಟಿ ರೂಪಾಯಿಗಳಷ್ಟು ಲಾಭವನ್ನು ಗಳಿಸಿದೆ.ಈ ಅಭಿವೃದ್ಧಿಗೆ ಕಾರಣೀಕರ್ತರಾಗಿರುವ ಸಂಘದ ಅಧ್ಯಕ್ಷ ಎಂ.ನಾಗೇಶ್ ಮತ್ತು ನಿರ್ದೇಶಕರುಗಳಿಗೆ ಹಾಗೂ ಸಂಘದ ಎಲ್ಲಾ ಸದಸ್ಯರುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಸಮಾರಂಭದಲ್ಲಿ ಮಂಡ್ಯ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ನಾಗಮಂಗಲ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.ರುದ್ರೇಶ್,ಮಾಜಿ ಅಧ್ಯಕ್ಷ ಎ.ಎಂ.ಜೈಸ್ವಾಮಿ,ಕಾರ್ಯದರ್ಶಿ ಬಿ.ಕೆ.ಮಂಜೇಗೌಡ, ತಾಲ್ಲೂಕು ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಪದ್ಮ ಸೇರಿದಂತೆ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಎಲ್ಲಾ ನಿರ್ದೇಶಕರುಗಳು ಮತ್ತು ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ನಿರ್ದೇಶಕರುಗಳು ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.
—————————ರವಿ ಬಿ ಹೆಚ್