ಚಿಕ್ಕಮಗಳೂರು;ಜಿಲ್ಲಾಡಳಿತ ವತಿಯಿಂದ ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11. ಗಂಟೆಗೆ ಕಡೂರು ತಾಲ್ಲೂಕಿನ ತಾಲ್ಲೂಕು ಕಛೇರಿ ಆವರಣದಲ್ಲಿ ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಮುಂಚಿತವಾಗಿ ತಮ್ಮ ಅಹವಾಲುಗಳನ್ನು ನೀಡಲು ಎಲ್ಲಾ ತಾಲ್ಲೂಕು ತಹಸೀಲ್ದಾರ್ ಕಛೇರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯಿತಿ ಕಛೇರಿಗಳಲ್ಲಿ ಸೆಪ್ಟೆಂಬರ್ 27 ರ ಸಂಜೆ 5.30 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ನೋಂದಾಯಿಸಿದವರು ಸಂಬಂಧಪಟ್ಟವರಿಂದ ಟೋಕನ್ ಪಡೆದುಕೊಳ್ಳಬಹುದಾಗಿದೆ.
ಸೆಪ್ಟೆಂಬರ್ 30ರಂದು ಕಾರ್ಯಕ್ರಮ ನಡೆಯುವ ದಿನದಂದು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 9.30 ರಿಂದ ಅಹವಾಲುಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೂಬ್ಬರೇ ಸಲ್ಲಿಸಬಹುದಾಗಿದೆ.ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು.ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.