ಕೆ.ಆರ್.ಪೇಟೆ:ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಅಮ್ಮನವರ ಅರ್ಚಕರಾದ ಪೂಜಾರಿ ನಾಗಯ್ಯ(60) ಅವರು ಇಂದು ಸಂಜೆ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಗ್ರಾ.ಪಂ.ಮಾಜಿ ಸದಸ್ಯೆ ಸಾವಿತ್ರಮ್ಮ, ಪುತ್ರಿ, ವರಲಕ್ಷ್ಮೀ, ಪುತ್ರ ಕೀರ್ತಿರಾಜ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸೆ.27ರಂದು ಶುಕ್ರವಾರ ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.